ಕರ್ನಾಟಕ

karnataka

ETV Bharat / city

ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಇನ್ನಿಲ್ಲ - ಕವಿ ಡಾ.ಚನ್ನವೀರ ಕಣವಿ

ಕನ್ನಡ ನಾಡಿನ ಜನಪ್ರಿಯ ಹಿರಿಯ ಸಾಹಿತಿ, ನಾಡೋಜ ಪುರಸ್ಕೃತ, ಚೆಂಬೆಳಕಿನ ಕವಿ ಖ್ಯಾತಿಯ ಡಾ.ಚೆನ್ನವೀರ ಕಣವಿ (93) ಧಾರವಾಡದ ಎಸ್​​ಡಿಎಂ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಇವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಂಜೆ 5ಕ್ಕೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

Kannada poet, Nadoja channaveera kanavi no more
ನಾಡೋಜ ಚನ್ನವೀರ ಕಣವಿ ಇನ್ನಿಲ್ಲ

By

Published : Feb 16, 2022, 10:16 AM IST

Updated : Feb 16, 2022, 1:19 PM IST

ಧಾರವಾಡ: ಕನ್ನಡ ಸಾಹಿತ್ಯ ಲೋಕಕ್ಕೆ ಬರಸಿಡಿಲು ಬಂದೊದಗಿದೆ. ನಾಡೋಜ, ಡಾ.ಚೆನ್ನವೀರ ಕಣವಿ ಧಾರವಾಡದ ಎಸ್​​ಡಿಎಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದ ಕಣವಿ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದ್ದಾರೆ.

ಕಣವಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಸಂಜೆ 5ಕ್ಕೆ ನಡೆಯಲಿದೆ. ಸೃಷ್ಠಿ ಪಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧಾರ ಮಾಡಲಾಗಿದೆ. ಇದಕ್ಕೂ ಮುನ್ನ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಿಡಲು ಜಿಲ್ಲಾಡಳಿತ ಸಿದ್ಧತೆ ಮಾಡಿದೆ.

ಕೊರೊನಾ ಕಾರಣಕ್ಕೆ ಜನವರಿ 14ರಂದು ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನವೀರ ಕಣವಿ ಅವರು ಕೆಲವು ದಿನಗಳ ಹಿಂದೆಯೇ ಕೋವಿಡ್​ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರು. ನಂತರ ಅಲ್ಲಿಯೇ ಇನ್ನಿತರ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ:ಖ್ಯಾತ ಗಾಯಕ, ಸಂಗೀತ ಸಂಯೋಜಕ ಬಪ್ಪಿ ಲಹಿರಿ ಇನ್ನಿಲ್ಲ

Last Updated : Feb 16, 2022, 1:19 PM IST

ABOUT THE AUTHOR

...view details