ಕರ್ನಾಟಕ

karnataka

ETV Bharat / city

ಕಿತ್ತೂರು ರಾಣಿ ಚೆನ್ನಮ್ಮಳ ತ್ಯಾಗ, ಬಲಿದಾನ ಯುವ ಪೀಳಿಗೆಗೆ ಮಾದರಿ: ಸಿಎಂ ಬೊಮ್ಮಾಯಿ

ಕಿತ್ತೂರು ರಾಣಿ ಚೆನ್ನಮ್ಮ ಅವರ ಕೊಡುಗೆ ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

By

Published : Oct 23, 2021, 1:12 PM IST

Kittur Chennamma jayanti
ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ

ಹುಬ್ಬಳ್ಳಿ: ಬ್ರಿಟಿಷರ ವಿರುದ್ಧ ಹೋರಾಡಿದ ನಾಡಿನ ಧೀಮಂತ, ಶ್ರೇಷ್ಠ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮಳ ತ್ಯಾಗ, ಬಲಿದಾನವನ್ನು ಇಂದು ಎಲ್ಲ ಜನತೆ ಸ್ಮರಿಸುವಂತ ದಿನವಾಗಿದೆ. ಚೆನ್ನಮ್ಮ ಅವರ ಕೊಡುಗೆ ಇಂದಿನ ಯುವ ಪೀಳಿಗೆಗೆ ಮಾದರಿ. ಬೆಳಗಾವಿಯಿಂದ ಬೆಂಗಳೂರುವರೆಗೆ ಚೆನ್ನಮ್ಮ ಜ್ಯೋತಿ ಬೆಳಗಿಸಿದ್ದು, ನನ್ನ ಸೌಭಾಗ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇಂದು ಕಿತ್ತೂರು ರಾಣಿ ಚೆನ್ನಮ್ಮಳ ಜಯಂತಿ ಅಂಗವಾಗಿ ನಗರದಲ್ಲಿನ ಚೆನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು. ನಗರದಲ್ಲಿ ಬ್ರಿಟಿಷರ ವಿರುದ್ಧ ರಣಕಹಳೆ ಊದಿದ ರಾಣಿ ಚೆನ್ನಮ್ಮಳ ಮೂರ್ತಿ ಮಾಡಬೇಕಾದರೆ ಅದಕ್ಕೆ ದೊಡ್ಡ ಹೋರಾಟವಾಗಿತ್ತು. ನಮ್ಮ ತಂದೆಯವರು ಉಸ್ತುವಾರಿ ಸಚಿವರಿದ್ದಾಗ ಎರಡು ವರ್ಷದ ಸುದೀರ್ಘ ಹೋರಾಟದ ಫಲವಾಗಿ ಈ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ ಎಂದರು.

ಚೆನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿದ ಸಿಎಂ

ಈಗ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಮಾಡುವ ಮಹತ್ತರ ಕಾರ್ಯ ನನ್ನ ಪಾಲಿಗೆ ಬಂದಿದೆ. 2011ರಲ್ಲಿ ನಾನು ಉಸ್ತುವಾರಿ ಸಚಿವನಿದ್ದಾಗ ಕಿತ್ತೂರು ಪ್ರಾಧಿಕಾರ ಮಾಡಿ ಅಂದು 8 ಕೋಟಿ ರೂ. ಬಿಡುಗಡೆಗೊಳಿಸಿ ಆ ಕೆಲಸ ಪ್ರಾರಂಭಿಸಲಾಗಿತ್ತು. ಈ ವರ್ಷ 50 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ಕೊಟ್ಟಿದೆ. ಹಣವನ್ನು ಸಹ ಬಿಡುಗಡೆ ಮಾಡುತ್ತಿದ್ದೇವೆ. ಬರುವ ದಿನಗಳಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಎಲ್ಲ ಸೂತ್ರಗಳನ್ನು ಬಿಜೆಪಿ ಸರ್ಕಾರ ಈಡೇರಿಸುತ್ತದೆ ಎಂದು ಭರವಸೆ ನೀಡಿದರು.

ABOUT THE AUTHOR

...view details