ಹುಬ್ಬಳ್ಳಿ: ಬಿಜೆಪಿಯಿಂದ ಸ್ಥಿರವಾದ ಸರ್ಕಾರ ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಸ್ಥಿರ ಸರ್ಕಾರ ನೀಡಲು ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಮಾತ್ರ ಸ್ಥಿರ ಸರ್ಕಾರ ಸಾಧ್ಯ: ಈಶ್ವರ್ ಖಂಡ್ರೆ
ಬಿಜೆಪಿಯ ರೈತ, ಕಾರ್ಮಿಕ, ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲು, ಅವರ ವೈಫಲ್ಯಗಳನ್ನು ಜನರಿಗೆ ಮುಟ್ಟಿಸಲು ಹಾಗೂ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ರಾಜ್ಯದಲ್ಲಿ ಸಂಕಲ್ಪ ಸಮಾವೇಶ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಬೇಕಿದೆ. ಹೀಗಾಗಿ ವಿಭಾಗ ಮಟ್ಟದ ಸಮಾವೇಶ ನಡೆಸುತ್ತಿದ್ದೇವೆ. ಇದರಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಿರಿಯ ಮುಖಂಡರು ಭಾಗವಹಿಸುತ್ತಿದ್ದಾರೆ. ಬಿಜೆಪಿಯ ರೈತ, ಕಾರ್ಮಿಕ, ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲು, ಅವರ ವೈಫಲ್ಯಗಳನ್ನು ಜನರಿಗೆ ಮುಟ್ಟಿಸಲು ಹಾಗೂ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ರಾಜ್ಯದಲ್ಲಿ ಸಂಕಲ್ಪ ಸಮಾವೇಶ ಮಾಡಲಾಗುತ್ತಿದೆ ಎಂದು ನುಡಿದರು.
ಇನ್ನು, ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಇನ್ನೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬರಲಿದೆ ಎಂದರು.