ಹುಬ್ಬಳ್ಳಿ: ಜಿಲ್ಲೆಯಲ್ಲಿರುವ ಎಲ್ಲಾ ಬ್ಯಾಂಕ್ಗಳು ಹಣಕಾಸು ಅವ್ಯವಹಾರಗಳನ್ನು ತಡೆಯಲು ಹಾಗೂ ಎಟಿಎಂ ಭದ್ರತೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಕಾಲಕಾಲಕ್ಕೆ ನೀಡುವ ಸುರಕ್ಷತೆ ಮತ್ತು ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಸೂಚನೆ ನೀಡಿದ್ದಾರೆ.
ನವನಗರದ ತಮ್ಮ ಕಚೇರಿಯಲ್ಲಿ ನಿನ್ನೆ ನಡೆದ ಬ್ಯಾಂಕ್ಗಳ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕ್ಗಳ ಸುರಕ್ಷತಾ ಕ್ರಮಗಳಿಗೆ ಪೊಲೀಸ್ ಇಲಾಖೆಯು ಸಹಕಾರ ನೀಡಲಿದೆ. ಗ್ರಾಹಕರಿಗೆ ಹಣಕಾಸು ವ್ಯವಹಾರದ ಕುರಿತು ಭದ್ರತೆ ಹಾಗೂ ಜಾಗೃತಿ ನೀಡುವುದು ಮುಖ್ಯವಾಗಿದೆ ಎಂದರು.