ಕಿಮ್ಸ್ ಸೇರಿ ಧಾರವಾಡ ಜಿಲ್ಲೆಯ 23 ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಕೊರತೆ
ಕೋವಿಡ್ ಶ್ವಾಸಕೋಶದ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಆಕ್ಸಿಜನ್ ಅವಶ್ಯಕತೆ ಹೆಚ್ಚಾಗಿದೆ. ಕಿಮ್ಸ್ ಸೇರಿ ಬಹುತೇಕ ಆಸ್ಪತ್ರೆಯಲ್ಲಿ ಆಕ್ಸಿಜನ್ ತೊಂದರೆ ಕಾಣುತ್ತಿದೆ. ಪರಿಸ್ಥಿತಿ ಉಲ್ಬಣಗೊಳ್ಳುವ ಸಾಧ್ಯತೆಯಿದೆ..
ಹುಬ್ಬಳ್ಳಿ: ಕಿಮ್ಸ್ ಸೇರಿದಂತೆ 23 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಆಕ್ಸಿಜನ್ ಕೊರತೆ
ಹುಬ್ಬಳ್ಳಿ :ಧಾರವಾಡ ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದಾರೆ. ಜತೆಗೆ ತೀವ್ರ ಉಸಿರಾಟದ ತೊಂದರೆ ಇರುವ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ಆಕ್ಸಿಜನ್ಗೆ ಹೆಚ್ಚಿನ ಬೇಡಿಕೆಯಿದೆ. ಆದರೆ, ಆಸ್ಪತ್ರೆಗಳಿಗೆ ಸರಿಯಾಗಿ ಆಕ್ಸಿಜನ್ ಪೂರೈಕೆಯಾಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.
ಜಿಲ್ಲೆಯಲ್ಲಿಯೇ ದಿನಕ್ಕೆ 250-300 ಪ್ರಕರಣ ಪತ್ತೆಯಾಗುತ್ತಿವೆ. ದಾಖಲಾಗುವ 30-40 ರೋಗಿಗಳಿಗೆ ಆಕ್ಸಿಜನ್ ಕಿಟ್ ಅವಶ್ಯಕತೆ ಇದೆ. ಆದರೆ, ಕಳೆದ ಒಂದು ವಾರದಿಂದ ಆಕ್ಸಿಜನ್ ಸರಿಯಾಗಿ ಪೂರೈಕೆ ಆಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿವೆ. ಉತ್ಪಾದನಾ ಘಟಕಗಳಲ್ಲಿ ಸರಿಯಾದ ಪ್ರಮಾಣದಲ್ಲಿ ಉತ್ಪಾದನೆ ಆಗದೇ ಇದ್ದರೇ ಮತ್ತೊಂದು ಸಂಕಷ್ಟ ಎದುರಿಸಬೇಕಾಗುತ್ತದೆ ಎನ್ನುತ್ತಾರೆ ವೈದ್ಯರು.
ಈ ಕುರಿತು ಪ್ರತಿಕ್ರಿಯಿಸಿರುವ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ, ಕೋವಿಡ್ ಶ್ವಾಸಕೋಶದ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಆಕ್ಸಿಜನ್ ಅವಶ್ಯಕತೆ ಹೆಚ್ಚಾಗಿದೆ. ಕಿಮ್ಸ್ ಸೇರಿ ಬಹುತೇಕ ಆಸ್ಪತ್ರೆಯಲ್ಲಿ ಆಕ್ಸಿಜನ್ ತೊಂದರೆ ಕಾಣುತ್ತಿದೆ. ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ಪರಿಸ್ಥಿತಿ ಉಲ್ಬಣಗೊಳ್ಳುವ ಸಾಧ್ಯತೆಯಿದೆ. ಈಗಾಗಲೇ ಈ ಕುರಿತು ಸರ್ಕಾರಕ್ಕೆ ಪ್ರಪೋಸಲ್ ಕೂಡ ಕಳಿಸಲಾಗಿದೆ. ಸರ್ಕಾರ ಶೀಘ್ರವೇ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವಿದೆ ಎಂದರು.