ಹುಬ್ಬಳ್ಳಿ:ಹು - ಧಾ ಪೊಲೀಸ್ ಕಮೀಷನರೇಟ್ನ ಕೇಶ್ವಾಪೂರ ಪೊಲೀಸ್ ಠಾಣೆಗೆ ಕಾನೂನು ಮತ್ತು ಸುವ್ಯವಸ್ಥೆಯ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು. ಹಿನ್ನೆಲೆಯಲ್ಲಿ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ಹಂಚಿನಾಳ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು.
ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅಲೋಕ್ ಕುಮಾರ್, ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಚ್ಚ ನ್ಯಾಯಾಲಯದ ಆದೇಶದ ಮೇಲೆ 11 ಪ್ರಕರಣಕ್ಕೆ ತಡೆಯಾಜ್ಞೆ ಬಂದಿದೆ. ಉಳಿದ ಪ್ರಕರಣ ತನಿಖೆಯ ಹಂತದಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಭದ್ರ ಪಡಿಸಲು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.