ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ಮೂಲಕ ವಿವಿಧ ಜಿಲ್ಲೆ ಹಾಗೂ ಪಕ್ಕದ ರಾಜ್ಯಗಳಿಗೆ ಸಾವಿರಾರು ಜನರು ತಮ್ಮ ಪ್ರಯಾಣ ಬೆಳೆಸುತ್ತಾರೆ. ಇಂತಹ ಪ್ರಯಾಣಿಕರು ಬಸ್ ಬರುವವರೆಗೂ ನಿಲ್ದಾಣದಲ್ಲಿ ಬೇಸರ ಕಳೆಯಲು ಗ್ರಂಥಾಲಯವನ್ನು ಆರಂಭಿಸಲಾಗಿದೆ. ಬಸ್‌ಗಾಗಿ ಕಾಯುವ ಸಮಯವನ್ನೇ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಸಾರಿಗೆ ಇಲಾಖೆ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ.
ರಾಜ್ಯದ ಕೆಲವು ಬಸ್ ನಿಲ್ದಾಣಗಳಲ್ಲಿ ಈಗಾಗಲೇ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲಾಗಿದೆ. ಆದರೆ ಧಾರವಾಡ ಜಿಲ್ಲೆಯಲ್ಲಿ ಇದೇ ಮೊದಲು ಎನ್ನುತ್ತಾರೆ ಗ್ರಾಮೀಣ ವಿಭಾಗದ ಸಾರಿಗೆ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡ.