ಕರ್ನಾಟಕ

karnataka

ETV Bharat / city

ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆಗೆ ವಿರೋಧ: ಧಾರವಾಡದಲ್ಲಿ ಮಠಾಧೀಶರ ಸಭೆ - egg for school students

ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆಗೆ ವಿರೋಧಿಸಿ ಮಠಾಧೀಶರು ಧಾರವಾಡದಲ್ಲಿ ಸಭೆ ನಡೆಸಿದರು. ಸರ್ಕಾರ ಮೊಟ್ಟೆ ವಿತರಣೆ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆಗೆ ವಿರೋಧ,swamiji oppose for distributing eggs to students,egg for school students
ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆಗೆ ವಿರೋಧ

By

Published : Dec 5, 2021, 12:47 AM IST

ಧಾರವಾಡ: ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆಗೆ ವಿರೋಧ ಹಿನ್ನೆಲೆ ಧಾರವಾಡದಲ್ಲಿ ಮಠಾಧೀಶರು ಸಭೆ ನಡೆಸಿದರು. ಬಸವ ಧರ್ಮ ಪೀಠ ಅಡಿಯ ಆರು ಪೀಠಾಧಿಪತಿಗಳ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಧಾರವಾಡದ ಅಕ್ಕಮಹಾದೇವಿ ಅನುಭಾವ ಪೀಠದಲ್ಲಿ ಶ್ರೀ ಗಂಗಾದೇವಿ ಮಾತಾಜಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 15ಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗಿದ್ದರು.

ಮೊಟ್ಟೆ ಆದೇಶ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಆಗ್ರಹಿಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಾಯಿತು. ಆದೇಶ ವಾಪಸ್ ಪಡೆಯದಿದ್ದಲ್ಲಿ ಹೋರಾಟ ನಡೆಸಲು ನಿರ್ಧಾರ ಮಾಡಲಾಯಿತು.

ಶಾಲಾ ಮಕ್ಕಳಿಗೆ ಮೊಟ್ಟೆ ಬದಲಿಗೆ ಸಸ್ಯ ಆಹಾರದಲ್ಲಿ ಉತ್ತಮ ಪೌಷ್ಟಿಕಾಂಶ ಇರುವ ಕಾಳಿನ ತರಕಾರಿ ಕೊಡಲಿ ಆದರೆ ‌ಮೊಟ್ಟೆ ಕೊಡಬಾರದು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಸರ್ಕಾರ ಮೊಟ್ಟೆ ವಿತರಣೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

(ಇದನ್ನೂ ಓದಿ: ₹ 36 ಸಾವಿರಕ್ಕೆ ಮನೆ ಬಾಗಿಲಿಗೆ ಬರಲಿದೆ ಬೌನ್ಸ್‌ ಕಂಪನಿಯ ಎಲೆಕ್ಟ್ರಿಕ್‌ ಸ್ಕೂಟರ್‌...!)

ABOUT THE AUTHOR

...view details