ಹುಬ್ಬಳ್ಳಿ: ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ನಿರ್ಧಾರವನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಎಂದಿನಂತೆ ದಿನಸಿ ಅಂಗಡಿ ಪ್ರಾರಂಭವಾಗಿದ್ದು, ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಬರುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿ ಲಾಕ್ಡೌನ್ ಸಡಿಲಿಕೆ: ನಿಯಮ ಮೀರದಂತೆ ಎಚ್ಚರಿಕೆ - ಸೀಲ್ ಡೌನ್ ಪ್ರದೇಶ
ಹುಬ್ಬಳ್ಳಿಯಲ್ಲಿ ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆ ನಡೆಸಲು ಅನುಮತಿ ನೀಡಲಾಗಿದೆ.
hubli
ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಶಾಪಿಂಗ್ ಮಾಲ್, ಬಾರ್, ರೆಸ್ಟೋರೆಂಟ್, ಜಿಮ್, ಧಾರ್ಮಿಕ ಚಟುವಟಿಕೆ, ಸಭೆ, ಸಮಾರಂಭದ ಮೇಲೆ ನಿರ್ಬಂಧ ಹೇರಲಾಗಿದೆ.
ಲಾಕ್ ಡೌನ್ ಸಡಿಲಿಕೆ ಅವಕಾಶವನ್ನು ಜನತೆ ಎಚ್ಚರಿಕೆಯಿಂದ ಬಳಸಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅನಗತ್ಯ ತಿರುಗಾಟ ಕಂಡು ಬಂದರೆ ಸಾರ್ವಜನಿಕರು ದಂಡ ಕಟ್ಟಬೇಕಾಗುತ್ತದೆ ಎಂದ ಸರ್ಕಾರ ಹಾಗೂ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.