ಕರ್ನಾಟಕ

karnataka

By

Published : Apr 29, 2022, 10:31 AM IST

ETV Bharat / city

ಧಾರವಾಡ ಬಳಿ ಲಾರಿಗಳ ಮಧ್ಯೆ ಡಿಕ್ಕಿ: ಚಾಲಕರಿಬ್ಬರೂ ಸಾವು..

ಲಾರಿ - ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಚಾಲಕರು ಮೃತಪಟ್ಟಿದ್ದಾರೆ.

ಧಾರವಾಡ ಬಳಿ ಲಾರಿಗಳ ಮಧ್ಯೆ ಡಿಕ್ಕಿ
ಧಾರವಾಡ ಬಳಿ ಲಾರಿಗಳ ಮಧ್ಯೆ ಡಿಕ್ಕಿ

ಧಾರವಾಡ:ಎರಡು ಲಾರಿ ಮಧ್ಯೆಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಜಿಲ್ಲೆಯ ಹಾರೋಬೆಳವಡಿ ಗ್ರಾಮದ ಬಳಿ ಇರುವ ಧಾರವಾಡ - ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸವದತ್ತಿ ಕಡೆಗೆ ಹೋಗುತ್ತಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಎರಡೂ ಲಾರಿಗಳ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕರ ಶವಗಳು ಲಾರಿಯಲ್ಲಿ ಸಿಕ್ಕಿಕೊಂಡಿವೆ. ಮೃತಪಟ್ಟವರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈ ಘಟನೆಯಿಂದ ಧಾರವಾಡ ಸವದತ್ತಿ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. (ಇದನ್ನೂ ಓದಿ: ಪಂಜಾಬ್​​ನಲ್ಲಿ ಬಸ್‌ಗಳಿಗೆ ಬೆಂಕಿ.. ಓರ್ವ ಸಜೀವ ದಹನ)

ABOUT THE AUTHOR

...view details