ಧಾರವಾಡ : ಹಿರಿಯ ಸಂಶೋಧಕ ಎಂ.ಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ಇಂದು ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಕಲಬುರ್ಗಿ ಹತ್ಯೆ ಕೇಸ್: ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿದ SIT - undefined
ಹಿರಿಯ ಸಂಶೋಧಕ ಎಂ.ಎಂ ಕಲಬುರ್ಗಿ ಹತ್ಯೆ ಸಂಬಂಧಪಟ್ಟ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿರುವ ಎಸ್ಐಟಿ, ಧಾರವಾಡದ 3ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳು ನ್ಯಾಯಾಲಯಕ್ಕೆ ಹಾಜರ್
ಮಹಾರಾಷ್ಟ್ರದ ಅಮೋಲ್ ಕಾಳೆ, ಬೆಳಗಾವಿಯ ಪ್ರವೀಣ್ ಚತುರ್ ಎಂಬಿಬ್ಬರು ಆರೋಪಿಗಳನ್ನು ತನಿಖೆಗೊಳಪಡಿಸಿರುವ ಎಸ್ಐಟಿ ಪೊಲೀಸರು, ಧಾರವಾಡದ 3ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಆರೋಪಿಗಳನ್ನು ನಾಳೆಯವರೆಗೂ ಎಸ್‌ಐಟಿ ವಶದಲ್ಲೇ ಇರುವಂತೆ ಸೂಚಿಸಲಾಗಿತ್ತು. ಆದ್ರೆ, ಒಂದು ದಿನ ಮುಂಚಿತವಾಗಿಯೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.