ಧಾರವಾಡ: ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ.ಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಾಲ್ವರು ಆರೋಪಿಗಳನ್ನು ಇಂದು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನಂತರ ಡಿ.21 ಹಾಗೂ 22ರಂದು ಸಾಕ್ಷಿ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತು.
ಆರೋಪಿಗಳಾದ ಹುಬ್ಬಳ್ಳಿಯ ಅಮಿತ್ ಬದ್ದಿ, ಧಾರವಾಡದ ಗಣೇಶ ಮಿಸ್ಕಿನ್, ಬೆಳಗಾವಿಯ ಪ್ರವೀಣ ಚತುರ್ ಹಾಗೂ ಮಹಾರಾಷ್ಟ್ರದ ವಾಸುದೇವ ಸೂರ್ಯವಂಶಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಪ್ರವೀಣ ಚತುರ್ ಅನ್ನು ಧಾರವಾಡದ ಕೇಂದ್ರ ಕಾರಾಗೃಹದಿಂದ ಹಾಗೂ ಉಳಿದ ಮೂವರನ್ನು ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಕರೆ ತಂದು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಡಿ.21 ಹಾಗೂ 22ರಂದು ಸಾಕ್ಷಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು.