ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕ್ರೈಂಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಗೆ ಭೇಟಿ ನೀಡಿದ ಡಿಜಿಪಿ ಪ್ರವೀಣ್ ಸೂದ್: ಅಧಿಕಾರಿಗಳೊಂದಿಗೆ ಸಭೆ - ಅಧಿಕಾರಿಗಳೊಂದಿಗೆ ಸಭೆ
ಅವಳಿ ನಗರದ ಹದಗೆಟ್ಟ ಕಾನೂನು ಸುವ್ಯವಸ್ಥೆ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹು-ಧಾ ಕಮಿಷನರ್ ಆರ್.ದಿಲೀಪ್ಗೆ ವಾರ್ನಿಂಗ್ ಮಾಡಿದ್ದರು. ಇದರ ಬೆನ್ನಲ್ಲೇ ಡಿಜಿಪಿ ಹುಬ್ಬಳ್ಳಿಗೆ ಭೇಟಿ ನೀಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದ ಮೂಲಕ ಆಗಮಿಸಿದ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಹು-ಧಾ ಕಮಿಷನರ್ ಆರ್.ದಿಲೀಪ್, ಎಸ್ಪಿ ವರ್ತಿಕಾ ಕಟಿಯಾರ್ ಸ್ವಾಗತ ಕೋರಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಜಿಲ್ಲೆಯಲ್ಲಿನ ಅಪರಾಧ ಪ್ರಕರಣಗಳ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುತ್ತಿದ್ದಾರೆ. ಅವಳಿ ನಗರದ ಹದಗೆಟ್ಟ ಕಾನೂನು ಸುವ್ಯವಸ್ಥೆ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹು-ಧಾ ಕಮಿಷನರ್ ಆರ್.ದಿಲೀಪ್ಗೆ ವಾರ್ನಿಂಗ್ ಮಾಡಿದ್ದರು. ಇದರ ಬೆನ್ನಲ್ಲೇ ಡಿಜಿಪಿ ಹುಬ್ಬಳ್ಳಿಗೆ ಭೇಟಿ ನೀಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.