ಕರ್ನಾಟಕ

karnataka

ETV Bharat / city

ಸಚಿವರಿಂದ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳ ಉದ್ಘಾಟನೆ - ಧಾರವಾಡ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳ ಉದ್ಘಾಟನೆ

ಕವಿವಿ ಆವರಣದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು 412.83 ಲಕ್ಷ ರೂ.ಗಳ ವೆಚ್ಚದಲ್ಲಿ ಹಾಗೂ ಸಪ್ತಾಪೂರದಲ್ಲಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು 387 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ.

minister inaugurates department of Social Welfare student hostels in dharwad
ವಿದ್ಯಾರ್ಥಿನಿಲಯಗಳ ಉದ್ಘಾಟನೆ

By

Published : Mar 7, 2021, 5:41 PM IST

ಧಾರವಾಡ: ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಕವಿವಿ ಆವರಣದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಸಪ್ತಾಪೂರದಲ್ಲಿ ನಿರ್ಮಿಸಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಇಂದು ಮಧ್ಯಾಹ್ನ ಕವಿವಿ ಆವರಣದಲ್ಲಿ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದರು.

ಸಚಿವರಿಂದ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳ ಉದ್ಘಾಟನೆ

ಕವಿವಿ ಆವರಣದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು 412.83 ಲಕ್ಷ ರೂ.ಗಳ ವೆಚ್ಚದಲ್ಲಿ ಹಾಗೂ ಸಪ್ತಾಪೂರದಲ್ಲಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು 387 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ.

ಇನ್ನೂ ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಅವರು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆಯಡಿ ಆಯ್ಕೆಯಾಗಿದ್ದ ವಿವಿಧ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಅರವಿಂದ ಬೆಲ್ಲದ, ಕವಿವಿ ಕುಲಪತಿ ಡಾ.ಕೆ.ಬಿ. ಗುಡಸಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್. ಪುರುಷೋತ್ತಮ ಸೇರಿದಂತೆ ಇತರ ಅಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ABOUT THE AUTHOR

...view details