ಹುಬ್ಬಳ್ಳಿ:ಕೋವಿಡ್ ಸಂದರ್ಭದಲ್ಲಿ ಯಾವುದೇ ತುರ್ತು ಪರಿಸ್ಥಿತಿಯಲ್ಲಿಯೂ ಕೂಡ ಜಿಲ್ಲಾಡಳಿತ ಕೆಲಸ ಮಾಡಲು ಸಿದ್ಧವಾಗಿದೆ. ಖಾಸಗಿ ಆಸ್ಪತ್ರೆಗಳು ಅಸಹಕಾರ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಖಾಸಗಿ ಆಸ್ಪತ್ರೆಗಳು ಅಸಹಕಾರ ತೋರಿದರೆ ಕಠಿಣ ಕ್ರಮ: ಜಗದೀಶ್ ಶೆಟ್ಟರ್ ಎಚ್ಚರಿಕೆ - ಖಾಸಗಿ ಆಸ್ಪತ್ರೆಗಳಿಗೆ ಶೆಟ್ಟರ್ ಎಚ್ಚರಿಕೆ
ಕೊರೊನಾ ಸಂಕಷ್ಟದ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಜಿಲ್ಲಾಡಳಿತ ದಿನದ 24 ಗಂಟೆಯೂ ಕೆಲಸ ಮಾಡಲು ಸಿದ್ಧವಿದೆ. ಒಂದು ವೇಳೆ ಖಾಸಗಿ ಆಸ್ಪತ್ರೆಗಳು ಈ ವಿಷಯದಲ್ಲಿ ಅಸಹಕಾರ ತೋರಿದ್ರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ 2000 ಆಕ್ಸಿಜನ್ ಬೆಡ್ ಸಿದ್ಧಪಡಿಸಲಾಗುತ್ತದೆ ಎಂದು ಅವರು ಹೇಳಿದರು.
ಕಿಮ್ಸ್ನಲ್ಲಿ 500 ಬೆಡ್ ಬದಲಿಗೆ ಸಾವಿರಕ್ಕೆ ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಬಾರಿಗೆ ಖಾಸಗಿ ಆಸ್ಪತ್ರೆಗಳು ತೋರಿದ ಅಸಹಕಾರ ಈ ಬಾರಿ ಇಲ್ಲ. ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಹುಬ್ಬಳ್ಳಿ-ಧಾರವಾಡದಲ್ಲಿ ವೆಂಟಿಲೇಟರ್ ಕೊರೆತಯಿಲ್ಲ. ಖಾಸಗಿ ಆಸ್ಪತ್ರೆಗಳು ಅಸಹಕಾರ ತೋರಿದರೆ ಕಠಿಣ ಕ್ರಮ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.