ಹುಬ್ಬಳ್ಳಿ:ದೇಶಪಾಂಡೆ ನಗರ ಹಾಗೂ ಭವಾನಿನಗರ ಮಧ್ಯೆ ಸಂಪರ್ಕ ಕಲ್ಪಿಸಲು ಕೃಷ್ಣ ಮಂದಿರ ಬಳಿ ನಿರ್ಮಿಸಲಾಗುತ್ತಿರುವ ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪರಿಶೀಲಿಸಿದರು.
ದೇಶಪಾಂಡೆ ನಗರದ ರೈಲ್ವೆ ಕೆಳಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವ ಶೆಟ್ಟರ್ - ರೈಲ್ವೆ ಕೆಳಸೇತುವೆ ಕಾಮಗಾರಿ
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಈ ಹಿಂದೆ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ್ ಅಂಗಡಿಯವರ ತ್ವರಿತ ಸ್ಪಂದನೆಯಿಂದ ರೈಲ್ವೆ ಕೆಳಸೇತುವೆ ಕಾಮಗಾರಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಜಗದೀಶ್ ಶೆಟ್ಟರ್
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಭಾಗದ ನಾಗರಿಕರ ಬಹುದಿನಗಳ ಬೇಡಿಕೆಯನುಸಾರವಾಗಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಲಾಗುತ್ತಿದೆ. ದೇಶಪಾಂಡೆ ನಗರದಲ್ಲಿ ರೈಲ್ವೆ ಕೆಳಸೇತುವೆ ಕಾಮಗಾರಿ ಹಾಗೂ ಉಣಕಲ್ ರೈಲು ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಇದೇ ವೇಳೆ ತಿಳಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಈ ಹಿಂದೆ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ್ ಅಂಗಡಿಯವರ ತ್ವರಿತ ಸ್ಪಂದನೆಯಿಂದ ಕಾಮಗಾರಿ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.