ಹುಬ್ಬಳ್ಳಿ :ದಲಿತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ ಗ್ರಾಮದ ದಲಿತರ ಕೇರಿಯಲ್ಲಿ ಮೆಹಂದಿ ಕಾರ್ಯಕ್ರಮದ ಸಂದರ್ಭದಲ್ಲಿ ದಲಿತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ಖಂಡನೀಯ.
ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪಿಎಸ್ಐ ಒಬ್ಬರನ್ನು ಅಮಾನತು ಮಾಡಲಾಗಿದೆ. ಅಲ್ಲದೇ, 5 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಪೂಜಾರಿ ತಿಳಿಸಿದರು.