ಹುಬ್ಬಳ್ಳಿ:ಆಧಾರ್ ಕಾರ್ಡ್ಗಾಗಿ ಅಲೆಯುವುದನ್ನು ತಪ್ಪಿಸಲು ಹುಬ್ಬಳ್ಳಿಯಲ್ಲಿ ಆಧಾರ್ ಸೇವಾ ಕೇಂದ್ರ ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಆಧಾರ್ ಸೇವಾ ಕೇಂದ್ರಕ್ಕೆ ಸಚಿವ ಪ್ರಹ್ಲಾದ್ ಜೋಶಿ ಭೇಟಿ.. - Union Parliamentary Affairs Minister Prahlad Joshi
ಈಗಾಗಲೇ ಹುಬ್ಬಳ್ಳಿ, ಮೈಸೂರು, ಧಾರವಾಡದಲ್ಲಿ ಈ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿ ದಿನಕ್ಕೆ 700 ಆಧಾರ್ ಸಮಸ್ಯೆಗಳನ್ನು ಬಗೆಹರಿಸಬಹುದು. ಇದನ್ನು ಸಾವಿರ ಜನರಿಗೆ ಹೆಚ್ಚಿಸಲು ಸೂಚಿಸಲಾಗಿದೆ ಎಂದರು.
ನೂತನ ಆಧಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಆಧಾರ್ ನೋಂದಣಿ, ತಿದ್ದುಪಡಿ ಸೇರಿದಂತೆ ಹೊಸ ಆಧಾರ್ ಪಡೆಯುವುದಕ್ಕೆ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಆಧಾರ್ಗಾಗಿ ಹುಬ್ಬಳ್ಳಿ-ಧಾರವಾಡ ಒನ್ ಸೇರಿದಂತೆ ವಿವಿಧೆಡೆಯಲ್ಲಿ ರಾತ್ರಿ ಪಾಳಿಯಲ್ಲೂ ಸಿಬ್ಬಂದಿ ಕೆಲಸ ಮಾಡಬೇಕಿತ್ತು. ಈ ಕುರಿತು ಗಮನಕ್ಕೆ ಬಂದ ಕಾರಣ ಅಧಿಕಾರಿಗಳೊಂದಿಗೆ ಚರ್ಚಿಸಿ ಆಧಾರ್ ಸೇವಾ ಕೇಂದ್ರ ಪ್ರಾರಂಭಿಸಲಾಗಿದೆ ಎಂದರು.
ಈಗಾಗಲೇ ಹುಬ್ಬಳ್ಳಿ, ಮೈಸೂರು, ಧಾರವಾಡದಲ್ಲಿ ಈ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿ ದಿನಕ್ಕೆ 700 ಆಧಾರ್ ಸಮಸ್ಯೆಗಳನ್ನು ಬಗೆಹರಿಸಬಹುದು. ಇದನ್ನು ಸಾವಿರ ಜನರಿಗೆ ಹೆಚ್ಚಿಸಲು ಸೂಚಿಸಲಾಗಿದೆ ಎಂದರು.