ಹುಬ್ಬಳ್ಳಿ:ರೈತರು ಬೆಳೆದ ಹತ್ತಿ ಬೆಳೆಗೆ ಬೆಂಬಲ ಬೆಲೆ ನೀಡಿ ಖರೀದಿ ಮಾಡಬೇಕೆಂದು ಆಗ್ರಹಿಸಿ, ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ರೈತರು ತಹಶೀಲ್ದಾರರ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಗೆ ಮನವಿ ಸಲ್ಲಿಸಿದರು.
ಹತ್ತಿಗೆ ಬೆಂಬಲ ಬೆಲೆ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ರೈತರ ಮನವಿ
ಲಾಕ್ಡೌನ್ನಿಂದಾಗಿ ತೀವ್ರ ಹತ್ತಿ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಲ್ಲದೆ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಬೆಳೆ ನಾಶವಾಗಿದೆ. ಇದರಿಂದ ರೈತರು ತಾವು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆ ಹುಬ್ಬಳ್ಳಿಯ ರೈತರು ತಮ್ಮ ಹತ್ತಿ ಬೆಳೆಗೆ ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕು ಎಂದು ತಹಶೀಲ್ದಾರರ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಡಿಸಿ ದೀಪಾ ಚೋಳನ್ ಅವರಲ್ಲಿ ಮನವಿ ಮಾಡಿದ್ದಾರೆ.
ಹತ್ತಿಗೆ ಬೆಂಬಲ ಬೆಲೆ ನೀಡುವಂತೆ ರೈತರಿಂದ ಸಚಿವ ಪ್ರಹ್ಲಾದ್ ಜೋಶಿಗೆ ಮನವಿ
ಈ ವರ್ಷ ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೂ ಈ ವರ್ಷ ತಾಲೂಕಿನಾದ್ಯಂತ ಬಿಟಿ ಹತ್ತಿಯನ್ನು ಬೆಳೆಯಲಾಗಿದೆ. ಅದನ್ನು ಇದೀಗ ಮನೆಯಲ್ಲಿಯೇ ಸಂಗ್ರಹ ಮಾಡಿಕೊಳ್ಳಲಾಗಿದೆ. ಪರಿಣಾಮ ಸರ್ಕಾರ ಹತ್ತಿ ಖರೀದಿಗೆ ಸೂಚನೆ ನೀಡಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಸವರಾಜ ಯೋಗಪ್ಪನವರ, ಯಲ್ಲಪ್ಪ ಕಂಬಳಿ, ಸಿದ್ದಪ್ಪ ಕಲಿವಾಳ, ಮಲ್ಲಪ್ಪ ಕಟಗಿ ಸೇರಿದಂತೆ ಮುಂತಾದವರು ಇದ್ದರು.