ಹುಬ್ಬಳ್ಳಿ: ಸಂಸತ್ನಲ್ಲಿ ಗದ್ದಲ ಎಬ್ಬಿಸುತ್ತಿರುವ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಿಗೆ ಕ್ಷಮೆ ಕೇಳುವ ಸೌಜನ್ಯ ಕೂಡ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
ಪ್ರತಿಪಕ್ಷಗಳಿಗೆ ಕ್ಷಮೆ ಕೇಳುವ ಸೌಜನ್ಯವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ - ಸಂಸತ್ನಲ್ಲಿ ಗದ್ದಲ ಎಬ್ಬಿಸಿದ ಕಾಂಗ್ರೆಸ್
ವಿರೋಧ ಪಕ್ಷ ಕೇವಲ ವಿರೋಧ ಮಾಡುವುದೇ ಕಾಯಕ ಅಂತ ತಿಳಿದುಕೊಂಡಿವೆ. ಈ ವಿರೋಧ ಪಕ್ಷದಿಂದ ಏನೂ ನಿರೀಕ್ಷಿಸಲು ಸಾಧ್ಯವಿಲ್ಲ. ಅವರಿಗೆ ಕ್ಷಮೆ ಕೇಳುವ ಸೌಜನ್ಯ ಕೂಡ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಹ್ಲಾದ್ ಜೋಶಿ
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷ ಕೇವಲ ವಿರೋಧ ಮಾಡುವುದೇ ಕಾಯಕ ಅಂತ ತಿಳಿದುಕೊಂಡಿವೆ. ಹೀಗಾಗಿ ಅವರಿಂದ ಏನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು.
ಹೆಲಿಕಾಪ್ಟರ್ ದುರಂತದಲ್ಲಿ ಒಬ್ಬ ಅಪ್ರತಿಮ ಯೋಧನನ್ನು ದೇಶ ಕಳೆದುಕೊಂಡಿದೆ. ಬಿಪಿನ್ ರಾವತ್ ಘಟನೆ ಅತ್ಯಂತ ದುರಾದೃಷ್ಟಕರ. ಈ ಕುರಿತು ತನಿಖೆ ಮಾಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.