ಹುಬ್ಬಳ್ಳಿ : ಸಿಎಂ ಬದಲಾವಣೆ ಪ್ರಶ್ನೆ ಪದೇ ಪದೇ ಉದ್ಭವಾಗುವುದಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವುದೆಲ್ಲಾ ಸತ್ಯವಲ್ಲ ಎಂದು ಸಚಿವ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಪಕ್ಷ ಕಟ್ಟುವ ನಿಟ್ಟಿನಲ್ಲಿ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆದಿದೆ ಎಂದರು.
ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಸರ್ಕಾರ ವಿಶೇಷ ಯೋಜನೆಗಳನ್ನು ಮಾಡಿದೆ . ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಜನಪರ ಕೆಲಸವನ್ನು ಜನರಿಗೆ ಮುಟ್ಟಿಸುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರ್.ಅಶೋಕ್ ಹೇಳಿದ್ದಾರೆ.