ಧಾರವಾಡ:ಕೋವಿಡ್ ಮೂರನೇ ಅಲೆ ತಡೆ ಮತ್ತು ನಿರ್ವಹಣೆಗಾಗಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ಆರೋಗ್ಯ ರಕ್ಷಣೆಗೆ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ವಾರ್ಡ್ಗಳನ್ನು ಸ್ಥಾಪಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೊರೊನಾ ಸಂಭಾವ್ಯ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆ ಮತ್ತು ಆರೈಕೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಕೊರೊನಾ ಎರಡನೇ ಅಲೆಯು ತೀವ್ರವಾಗಿ ಬಾಧಿಸಿದ ಪರಿಣಾಮವಾಗಿ ಕರ್ನಾಟಕ ರಾಜ್ಯದಲ್ಲಿ 52 ಮಕ್ಕಳು ತಮ್ಮ-ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಾಲ ಸೇವಾ ಹಾಗೂ ಬಾಲಹಿತೈಷಿ ಯೋಜನೆಗಳಡಿ ಆ ಮಕ್ಕಳಿಗೆ ಶಿಕ್ಷಣ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದರು.
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಬದ್ಧ