ಹುಬ್ಬಳ್ಳಿ: ರಾಜ್ಯದಲ್ಲಿ ಮದ್ಯ ಮಾರಾಟ ಪುನಾರಂಭ ವಿಚಾರವಾಗಿ ಧಾರವಾಡ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈಗ ಇದಕ್ಕೆ ವಿರುದ್ಧವಾದ ಮನವಿ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಚರ್ಚೆಗೆ ಗ್ರಾಸ ಒದಗಿಸಿದೆ.
ಹುಬ್ಬಳ್ಳಿ-ಧಾರವಾಢ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ರಾಜ್ಯಾದ್ಯಂತ ಮದ್ಯ ನಿಷೇಧ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಆಡಳಿತ ಪಕ್ಷದ ಶಾಸಕರೇ ಮದ್ಯ ನಿಷೇಧಕ್ಕೆ ಧ್ವನಿ ಎತ್ತಿರುವುದಕ್ಕೆ ಅರವಿಂದ ಬೆಲ್ಲದ ಪರವಾಗಿ ಪ್ರಶಂಸೆಗಳ ಮಹಾಪೂರವೇ ಹರಿದು ಬಂದಿತ್ತು. ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರು ಅರವಿಂದ ಬೆಲ್ಲದ ಅವರನ್ನು ಸನ್ಮಾನಿಸಿ ನಿಮ್ಮ ಜೊತೆ ನಾವಿದ್ದೇವೆ. ಮದ್ಯ ನಿಷೇಧ ಹೋರಾಟಕ್ಕೆ ಕೈಜೋಡಿಸುವುದಾಗಿ ಭರವಸೆ ನೀಡಿದ್ದರು.