ಧಾರವಾಡ: ತಹಶೀಲ್ದಾರ್ ಕಚೇರಿಗೆ ಎಂಟ್ರಿಕೊಟ್ಟ ಖದೀಮನೊಬ್ಬ ಗ್ರಾಮ ಲೆಕ್ಕಾಧಿಕಾರಿ ಮೊಬೈಲ್ ಎಗರಿಸಿ ಪರಾರಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮ ಲೆಕ್ಕಾಧಿಕಾರಿ ರೇಖಾ ಗಾಣಿಗೇರ ಎಂಬುವರು ಕಚೇರಿ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ ಟೇಬಲ್ ಮೇಲೆ ಮೊಬೈಲ್ ಇಟ್ಟಿರುವುದನ್ನು ಗಮನಿಸಿದ ಚಾಲಾಕಿ ಕಳ್ಳ, ಮುಗ್ಧನಂತೆ ಬಂದು ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದಾನೆ.
ಮುಗ್ಧನಂತೆ ಬಂದು ಗ್ರಾಮ ಲೆಕ್ಕಾಧಿಕಾರಿ ಮೊಬೈಲ್ ಎಗರಿಸಿದ ಕಳ್ಳ: ದೃಶ್ಯ ಸೆರೆ - Dharwad Tahsildar Office
ಮುಗ್ಧನಂತೆ ಬಂದು ಗ್ರಾಮ ಲೆಕ್ಕಾಧಿಕಾರಿಯ ಮೊಬೈಲ್ ಎಗರಿಸಿ ಕಳ್ಳನೊಬ್ಬ ಪರಾರಿ ಆಗಿರುವ ಘಟನೆ ಧಾರವಾಡ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದ್ದು, ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಇನ್ನು ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.