ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಅವರದ್ದು ವಿಕೃತ ಮನಸ್ಸು. ಸಂಘ ಪರಿವಾರದವರು ತಾಲಿಬಾನಿಗಳಲ್ಲ. ಕಾಂಗ್ರೆಸ್- ಜೆಡಿಎಸ್ ಸಂಸ್ಕೃತಿ ತಾಲಿಬಾನಿಗಳದ್ದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಿಕಾಸಸೌಧದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಐಎಎಸ್, ಐಪಿಎಸ್ ಅಧಿಕಾರಿಗಳು ಸಂಘ ಪರಿವಾರದವರು ಆಗಿರಬಾರದಾ? ಆ ಸ್ಥಾನದಲ್ಲಿ ತಾಲಿಬಾನ್ಗಳು ಇರಬೇಕಾ? ಎಂದು ಪ್ರಶ್ನಿಸಿದರು.
ಹೆಚ್ಡಿಕೆಗೆ ಬುದ್ಧಿಭ್ರಮಣೆ :
ಆರ್ಎಸ್ಎಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಕಿಡಿಕಾರಿದರು. ದೇಶದ ಸಂಸ್ಕೃತಿ ಉಳಿಸುತ್ತಿರುವುದು ಆರ್ಎಸ್ಎಸ್ ದೇಶದ ಸಂಕಷ್ಟದಲ್ಲಿ ಗಟ್ಟಿಯಾಗಿ ನಿಲ್ಲುತ್ತಿರುವುದು ಸಂಘ ಪರಿವಾರ. ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ ಎಂದರು.
ಐಟಿ ದಾಳಿ:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಉಮೇಶ್ ಹೆಸರು ಚನ್ನಾಗಿ ಗೊತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ: ಬಿಎಸ್ವೈ, ಬಿವೈ ರಾಘವೇಂದ್ರ ಪ್ರತಿಕ್ರಿಯೆ ಹೀಗಿದೆ