ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗ್ತಾನೆ ಇದೆ. ಹುಬ್ಬಳ್ಳಿಯಲ್ಲೂ ಕೂಡ ಮುಸ್ಲಿಂ ಸಮುದಾಯದವರು ಸಿಎಎ ಹಾಗೂ ಎನ್ಆರ್‌ಸಿ ರದ್ದುಗೊಳ್ಳುವಂತಾಗಲಿ ಅಂತಾ ಹಳೇಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯ್ತು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರಾರ್ಥನೆ.. - ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ
ಈ ಸಂದರ್ಭದಲ್ಲಿ ನೂರಾರು ಮುಸ್ಲಿಂ ಮಹಿಳೆಯರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.
ಪೌರತ್ವ ತಿದ್ದುಪಡಿ ಕಾಯ್ದೆಗೆ ಮುಸ್ಲಿಂ ಮಹಿಳೆಯರಿಂದ ಪ್ರಾರ್ಥನೆ
ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಎಎ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರಿಗೆ ಸಂಕಷ್ಟವನ್ನು ತಂದೊಡ್ಡುವ ಕಾಯ್ದೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಕೂಡಲೇ ಕೇಂದ್ರ ಸರ್ಕಾರ ದೇಶದ ಮುಸ್ಲಿಂ ಸಮುದಾಯದವರ ಹಿತದೃಷ್ಟಿಯಿಂದ ಸಿಎಎ ಹಾಗೂ ಎನ್‌ಆರ್‌ಸಿ ರದ್ದುಗೊಳಿಸಿಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನೂರಾರು ಮುಸ್ಲಿಂ ಮಹಿಳೆಯರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.