ಹುಬ್ಬಳ್ಳಿ:ವಾಣಿಜ್ಯನಗರಿಯಲ್ಲಿ ಸುರಿದ ಭಾರಿ ಮಳೆಗೆ ಹಳೇ ಹುಬ್ಬಳ್ಳಿಯ ಗಣೇಶನಗರದ 2ನೇ ಕ್ರಾಸ್ ಜಲಾವೃತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ಭಾರಿ ಮಳೆಯಿಂದ ಜಲಾವೃತಗೊಂಡ ಹಳೇ ಹುಬ್ಬಳ್ಳಿಯ ಗಣೇಶನಗರ - old-hubli-ganesh-nagar-drowned-in water
ಸಾರ್ವಜನಿಕರು ಮಳೆ ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ಚರಂಡಿ ತುಂಬಿದ್ದು, ಮಳೆನೀರು ಸಮರ್ಪಕವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದಿದ್ದರಿಂದ ಬಡಾವಣೆ ಜಲಾವೃತಗೊಂಡಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಭಾರಿ ಮಳೆ
ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಇಲ್ಲಿನ ಮೂವತ್ತಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದೆ. ಸಾರ್ವಜನಿಕರು ಮಳೆ ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ಚರಂಡಿ ತುಂಬಿದ್ದು, ಮಳೆನೀರು ಸಮರ್ಪಕವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದಿದ್ದರಿಂದ ಬಡಾವಣೆ ಜಲಾವೃತಗೊಂಡಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜಲಾವೃತಗೊಂಡ ಹಳೇ ಹುಬ್ಬಳ್ಳಿಯ ಗಣೇಶನಗರ
ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಕಟ್ಟಡಗಳು ಜಲಾವೃತಗೊಂಡಿದ್ದು, ನಿತ್ಯ ಜೀವನಕ್ಕೆ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ.