ಹುಬ್ಬಳ್ಳಿ: ಕೊರೊನಾದ ತೀವ್ರತೆ ತಡೆಯುವಲ್ಲಿ ಲಸಿಕೆ ಪರಿಣಾಮಕಾರಿ ಎಂದು ಸರ್ಕಾರ ಜನರ ಮನವೊಲಿಸಲು ಪ್ರಯತ್ನ ಮಾಡುತ್ತಿದೆ. ಆದರೆ ಇನ್ನೂ ಕೆಲವೆಡೆ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನತೆ ಹಿಂದೇಟು ಹಾಕುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಜ್ಜಿಯೊಬ್ಬರು ವ್ಯಾಕ್ಸಿನ್ ಹಾಕಿಸಿಕೊಳ್ಳುವಾಗ ರಂಪಾಟ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಧಾರವಾಡ ಜಿಲ್ಲೆಯಲ್ಲಿ ಎಲ್ಲರೂ ವ್ಯಾಕ್ಸಿನೇಷನ್ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಹುಬ್ಬಳ್ಳಿಯ ಜನತಾ ಬಜಾರ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಮಾಡುವವರ ಬಳಿ ತೆರಳಿ ವ್ಯಾಕ್ಸಿನ್ ನೀಡಲಾಗುತ್ತಿದೆ. ಆದರೆ ವ್ಯಾಕ್ಸಿನ್ ನೀಡುವ ವೇಳೆ ತರಕಾರಿ ಮಾರುತ್ತಿದ್ದ ಅಜ್ಜಿಯೊಬ್ಬರು ರಾದ್ಧಾಂತ ಮಾಡಿದ್ದಾರೆ.