ಧಾರವಾಡ: ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 39 ಕ್ಕೆ ಏರಿದೆ.
ಧಾರವಾಡದಲ್ಲಿಂದು ಓರ್ವ ಮಹಿಳೆಗೆ ಕೊರೊನಾ ಸೋಂಕು ದೃಢ: ಜಿಲ್ಲಾಧಿಕಾರಿ ದೀಪಾ ಚೋಳನ್ - ಡಿಸಿ ದೀಪಾ ಚೋಳನ್
ಆಂಧ್ರಪ್ರದೇಶದಿಂದ ಜಿಲ್ಲೆಗೆ ಬಂದಿದ್ದ 24 ವರ್ಷದ ಮಹಿಳೆಯೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39 ಕ್ಕೆ ಏರಿದೆ.

ಜಿಲ್ಲಾಧಿಕಾರಿ ದೀಪಾ ಚೋಳನ್
24 ವರ್ಷದ ಮಹಿಳೆಗೆ (ಪಿ-2002) ಕೊರೊನಾ ಸೋಂಕು ದೃಢಪಟ್ಟಿದ್ದು ಈಕೆ ಆಂಧ್ರಪ್ರದೇಶದಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಮಹಿಳೆ ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಈಗ ಮಹಿಳೆಗೆ ಕೊರೊನಾ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 39 ಕ್ಕೆ ಏರಿಕೆಯಾಗಿದೆ. ಈಗಾಗಲೇ 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.