ಕರ್ನಾಟಕ

karnataka

ETV Bharat / city

ಹಾಸ್ಟೆಲ್​ ಬಳಿ ಗಾಂಜಾ ಮಾರಾಟ ಪ್ರಕರಣ: ಅಪರಾಧಿಗೆ ಒಂದು ವರ್ಷ ಜೈಲು ಶಿಕ್ಷೆ - hubli marijuana case

ಹುಬ್ಬಳ್ಳಿಯಲ್ಲಿ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದವನಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದೆ.

ಗಾಂಜಾ ಮಾರಾಟ ಪ್ರಕರಣ
ಗಾಂಜಾ ಮಾರಾಟ ಪ್ರಕರಣ

By

Published : Dec 11, 2021, 7:42 AM IST

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿರೂರ ಪಾರ್ಕ್ ಖೋಡೆ ಹಾಸ್ಟೆಲ್ ಬಳಿ 2019ರಲ್ಲಿ ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಅಪರಾಧಿ. 2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಆನಂದ ಒನಕುದ್ರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ 1.1ಕೆಜಿ ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಈ ಪ್ರಕರಣ ವಿಚಾರಣೆ ನಡೆಸಿದ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಉಮೇಶ ಮಂಜುನಾಥ ಭಟ್ ಅಡಿಗ ಆದೇಶ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ವಿ. ಪಾಟೀಲ ವಾದ ಮಂಡಿಸಿದ್ದರು.

ಇದನ್ನೂ ಓದಿ:ಅಂಬರ್ ಗ್ರೀಸ್ ಕಳ್ಳಸಾಗಣೆ ಪ್ರಕರಣ : ಆರೋಪಿಗೆ ನಿರೀಕ್ಷಣಾ ಜಾಮೀನು

ABOUT THE AUTHOR

...view details