ಹುಬ್ಬಳ್ಳಿ :ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಸಮರಕ್ಕೆ ರಾಜಕೀಯ ಪಕ್ಷಗಳು ತಂತ್ರ-ಪ್ರತಿತಂತ್ರ ರೂಪಿಸುವ ಮೂಲಕ ಎರಡು ಕ್ಷೇತ್ರಗಳನ್ನು ತೆಕ್ಕೆಗೆ ತೆಗೆದುಕೊಳ್ಳಲು ಎಲ್ಲಿಲ್ಲದ ಹರಸಾಹಸ ಪಡುತ್ತಿವೆ. ಇದೆಲ್ಲದರ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯಕ್ಕೆ ಆದ್ಯತೆ ನೀಡಿ ಜಿಮ್ನಲ್ಲಿ ವರ್ಕೌಟ್ ಮಾಡಿದ್ದಾರೆ.
ಇಂದು ಬೆಳಗ್ಗೆಯೇ ಹುಬ್ಬಳಿಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್ವೊಂದರಲ್ಲಿ ವಾಕಿಂಗ್ ಮಾಡಿ, ದೈಹಿಕ ಕಸರತ್ತು ನಡೆಸಿದ್ದಾರೆ. ಈ ಮೂಲಕ ಮಾಜಿ ಸಿಎಂ ಒತ್ತಡದ ಮಧ್ಯೆಯೂ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ.