ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳ ಹಿಂದೆ ಬಂಧನವಾಗಿದ್ದ ವಿಚಾರಣಾಧೀನ ಖೈದಿ ದಾವಲ್ ಸಾಬ್ ಹೊಸಪೇಟ್, ನಿನ್ನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ವಿಚಾರಣಾಧೀನ ಖೈದಿ ಸಾವಿಗೆ ಪೊಲೀಸರೇ ಕಾರಣ: ಕುಟುಂಬಸ್ಥರ ಆರೋಪ - undefined
ಲಾರಿ ಕಳ್ಳತನ ಆರೋಪದ ಮೇಲೆ ಪೊಲೀಸರ ವಶದಲ್ಲಿದ್ದ ವಿಚಾರಣಾಧೀನ ಖೈದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆತನ ಸಾವಿಗೆ ಪೊಲೀಸರೇ ಕಾರಣ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.
ಪೊಲೀಸರ ವಶದಲ್ಲಿದ್ದ ವಿಚಾರಣಾಧೀನ ಖೈದಿ ಸಾವು
ಲಾರಿ ಕಳ್ಳತನ ಆರೋಪದ ಮೇಲೆ ಹಳೇ ಹುಬ್ಬಳ್ಳಿಯ ನಿವಾಸಿ ದಾವಲ್ ಸಾಬ್ನನ್ನು ಇಲ್ಲಿನ ಉಪನಗರ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದರು. ಆದರೆ ಆರೋಪಿ ಪಿಡ್ಸ್ ಕಾಯಿಲೆಯಿಂದ ಬಳಲುತ್ತಿದ್ದನೆಂದು ಪೊಲೀಸರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಿಸದೇ ದಾವಲ್ ಮೃತಪಟ್ಟಿದ್ದಾನೆ. ಆದರೆ ವಿಚಾರಣೆಯ ನೆಪದಲ್ಲಿ ಪೊಲೀಸರು ಹಲ್ಲೆ ಮಾಡಿದ್ದರಿಂದಲೇ ದಾವಲ್ ಮೃತಪಟ್ಟಿದ್ದಾನೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.
ಇನ್ನು ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jun 28, 2019, 1:20 PM IST