ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸ್ ಸ್ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಡನಾಳ ಕ್ರಾಸ್ ಬಳಿ ನಡೆದಿದೆ. ಕಲಘಟಗಿ ಪೊಲೀಸ್ ಠಾಣೆಯ ಪಂಡಿತ ಕಾಸರ್(28) ಮೃತ ಪೊಲೀಸ್ ಕಾನ್ಸ್ ಸ್ಟೇಬಲ್ ಎಂದು ತಿಳಿದು ಬಂದಿದೆ.
ಅಪರಿಚಿತ ವಾಹನ ಡಿಕ್ಕಿ: ಕರ್ತವ್ಯನಿರತ ಪೊಲೀಸ್ ಪೇದೆ ಸಾವು - police constable died in road accident
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸ್ ಸ್ಟೇಬಲ್ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಬುಡನಾಳ ಕ್ರಾಸ್ ಬಳಿ ನಡೆದಿದೆ. ಮೃತ ಪೊಲೀಸ್ ಪೇದೆಯನ್ನು ಪಂಡಿತ ಕಾಸರ್ ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿ ತಾಲೂಕಿನ ಬುಡನಾಳ ಕ್ರಾಸ್ ಬಳಿ ನಿನ್ನೆ ಸಾಯಂಕಾಲ ಮಳೆ, ಬಿರುಗಾಳಿಯಿಂದ ರಸ್ತೆಯಲ್ಲಿ ಮರಗಳು ಬಿದ್ದಿದ್ದವು. ಇದರಿಂದ ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಉಂಟಾಗಿತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾನ್ಸ್ ಸ್ಟೇಬಲ್ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.