ಹುಬ್ಬಳ್ಳಿ:ನಗರದಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕಾ ಘಟಕಗಳ ಮೇಲೆ ಮಹಾನಗರ ಪಾಲಿಕೆ ಪರಿಸರ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿ, ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಈಟಿವಿ ಭಾರತ ವರದಿಗೆ ಫಲ ಸಿಕ್ಕಿದೆ.
ಆ. 2 ರಂದು 'ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ: ಸಾರ್ವಜನಿಕರ ಆಕ್ರೋಶ' ಎಂಬ ವರದಿಯನ್ನು ಈಟಿವಿ ಭಾರತ ಪ್ರಕಟಿಸಿತ್ತು. ಇದರಿಂದ ಎತ್ತೆಚ್ಚುಕೊಂಡ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಕೊನೆಗೂ ಅಕ್ರಮವಾಗಿ ಸಂಗ್ರಹಿಸಿದ್ದ ಹಾಗೂ ತಯಾರಿಸುತ್ತಿದ್ದ ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.