ಕರ್ನಾಟಕ

karnataka

ETV Bharat / city

ಬಿಜೆಪಿ 15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ : ಸಚಿವ ಪ್ರಲ್ಹಾದ್ ಜೋಶಿ

ದೇಶದೆಲ್ಲೆಡೆ ಬಿಜೆಪಿ ಪರ ಅಲೆಯಿದೆ. ಉತ್ತರಪ್ರದೇಶ, ಉತ್ತರಾಖಂಡದಲ್ಲಿ ನಮ್ಮ ಪರ ಅಲೆಯಿದೆ. ಪಂಜಾಬ್​​ನಲ್ಲಿ ಹೊಸ ಪ್ರಯೋಗ ಮಾಡುತ್ತಿದ್ದೇವೆ. ಬಿಜೆಪಿ ಮತ್ತೊಮ್ಮೆ ಪಾರುಪತ್ಯ ಸಾಧಿಸಲಿದೆ..

Union Minister Pralhad Joshi voting
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತದಾನ

By

Published : Dec 10, 2021, 3:29 PM IST

Updated : Dec 10, 2021, 3:48 PM IST

ಹುಬ್ಬಳ್ಳಿ: ರಾಜ್ಯಾದ್ಯಂತ ಇಂದು ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ 15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಮತದಾನದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಬಿಜೆಪಿ ಸಂಘಟನೆಯಿಂದ ದೊಡ್ಡ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದೆ. ಪ್ರದೀಪ್ ಶೆಟ್ಟರ್ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ.

ಪರಿಷತ್‌ ಚುನಾವಣೆಯಲ್ಲಿ ಮತದಾನದ ನಂತರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿರುವುದು..

ದೇಶದೆಲ್ಲೆಡೆ ಬಿಜೆಪಿ ಪರ ಅಲೆಯಿದೆ. ಉತ್ತರಪ್ರದೇಶ, ಉತ್ತರಾಖಂಡದಲ್ಲಿ ನಮ್ಮ ಪರ ಅಲೆಯಿದೆ. ಪಂಜಾಬ್​​ನಲ್ಲಿ ಹೊಸ ಪ್ರಯೋಗ ಮಾಡುತ್ತಿದ್ದೇವೆ. ಬಿಜೆಪಿ ಮತ್ತೊಮ್ಮೆ ಪಾರುಪತ್ಯ ಸಾಧಿಸಲಿದೆ ಎಂದರು.

ಹಣ ಹಂಚಿಕೆ ಆರೋಪಕ್ಕೆ ಪ್ರತಿಕ್ರಿಯೆ :ಪರಿಷತ್ ಚುನಾವಣೆಯಲ್ಲಿ ಹಣ ಹಂಚಿಕೆ ಆರೋಪಕ್ಕೆ ಪ್ರತಿಕ್ರಿಯಿಸಿ, ಎಲ್ಲ ಪಕ್ಷಗಳಲ್ಲೂ, ನಾಯಕರುಗಳಲ್ಲಿ ಈ ಬಗ್ಗೆ ಗಂಭೀರ ಚಿಂತನೆ ಆಗಬೇಕಿದೆ. ಲಂಚ ಕೊಟ್ಟು ಆರಿಸಿ ಬರುತ್ತಿದ್ದಾರೆ. ಹಣ ಹಂಚಿಕೆ ಆರೋಪ ದೊಡ್ಡ ಪ್ರಮಾಣದಲ್ಲಿ ಕೇಳಿ ಬಂದಿದೆ. ಹಣ ಹಂಚಿಕೆ ಇದೇ ರೀತಿ ಮುಂದುವರಿದ್ರೆ ಪರಿಷತ್ ಬೇಕೋ ಬೇಡ್ವೋ ಅನ್ನೋ ಚರ್ಚೆ ಆಗಬೇಕಾಗುತ್ತದೆ. ಸಾರ್ವತ್ರಿಕ ಚುನಾವಣೆಗಿಂತ ಪರಿಷತ್ ಚುನಾವಣೆಯಲ್ಲಿ ಹೆಚ್ಚು ಹಣ ಖರ್ಚು ಅಗುತ್ತಿದೆಯೆಂದರು.

ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ :ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ.‌ ಕರ್ನಾಟಕ ಎಲ್ಲ ರೀತಿಯ ಸಿದ್ಧತೆ ನಡೆಸಿದೆ. ಕಾಮಗಾರಿ ಆರಂಭಿಸಲು ಹಣ ಸಹ ತಗೆದಿರಿಸಲಾಗಿದೆ. ಹುಬ್ಬಳ್ಳಿ ಅಂಕೋಲ ರೈಲ್ವೆ ಯೋಜನೆ ವಿಚಾರದಲ್ಲಿ ನ್ಯಾಯಾಲಯಕ್ಕೆ ಹೋಗಿದ್ದಾರೆ. ನಾನು ಸಿಎಂ ಜೊತೆ ಮಾತನಾಡಿದ್ದೇನೆ. ದೌರ್ಭಾಗ್ಯ ಅಂದ್ರೆ ಕೆಲವರು ವನ್ಯಜೀವಿ ಹೆಸರಿನಲ್ಲಿ ನ್ಯಾಯಾಲಯಕ್ಕೆ ಹೋಗುತ್ತಿದ್ದಾರೆ.

ನಮಗೂ ಅರಣ್ಯ, ವನ್ಯಜೀವಿ ಮೇಲೆ ಕಾಳಜಿ ಇದೆ. ಇಲ್ಲಿಂದ ಒಂದು ರೈಲು ಸಂಪರ್ಕ ಮಾಡಿದ್ರೆ. ಉತ್ತರ ಕರ್ನಾಟಕದ ಭಾಗ್ಯದ ಬಾಗಿಲು ತೆರೆಯಲಿದೆ. ಮಂಗಳೂರು ಅಭಿವೃದ್ಧಿ ಹೊಂದಲು ಅಲ್ಲಿನ ಬಂದರು ಪ್ರಮುಖ ಪಾತ್ರ ವಹಿಸಿದೆ. ಹುಬ್ಬಳ್ಳಿಯಲ್ಲಿ ಕೈಗಾರಿಕೋದ್ಯಮಿಗಳಿಗೆ ಹೂಡಿಕೆ ಮಾಡಿ ಅಂದ್ರೆ ನಿಮ್ಮಲ್ಲಿ ಬಂದರು ಇಲ್ಲ ಅಂತಾರೆ.

ಪರಿಸರವಾದಿಗಳು ಸರ್ಕಾರ ಜೊತೆ ಕುಳಿತು ಮಾತನಾಡಲಿ. ಹಠಮಾರಿತನ ಮಾಡೋದು ಸರಿ ಅಲ್ಲ. ಕಡಿಮೆ ಹಾನಿ ಆಗುವಂತೆ ನೋಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ ಎಂದರು.

ಇದನ್ನೂ ಓದಿ:ಪ್ರೀತಿ ನಿರಾಕರಿಸಿದ ಯುವತಿಯ ಮನೆಗೆ ನುಗ್ಗಿ ಅತ್ಯಾಚಾರ: ಬಜ್ಪೆ ಪೊಲೀಸರಿಂದ ಕಾಮುಕನ ಬಂಧನ

ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿ ಪರ ಪ್ರಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಜ್ಯಾಧ್ಯಕ್ಷರ ಜೊತೆ ಮಾತನಾಡುವೆ ಎಂದು ತಿಳಿಸಿದರು.

Last Updated : Dec 10, 2021, 3:48 PM IST

ABOUT THE AUTHOR

...view details