ಹುಬ್ಬಳ್ಳಿ (ಧಾರವಾಡ):ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 131ನೇ ಜಯಂತ್ಯುತ್ಸವದ ಅಂಗವಾಗಿ ಹುಬ್ಬಳ್ಳಿಯ ಪ್ರಧಾನ ಅಂಚೆ ಕಚೇರಿಯ ಎದುರಿನಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಈ ವೇಳೆ ಸಚಿವ ಕೆ ಎಸ್ ಈಶ್ವರಪ್ಪ ಮೇಲಿರುವ ಆರೋಪಗಳ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲು ಸಚಿವರು ನಿರಾಕರಿಸಿದರು. ಇಂದು ಅಂಬೇಡ್ಕರ್ ಜಯಂತಿ. ಹೀಗಾಗಿ ರಾಜಕೀಯ ವಿಚಾರಗಳ ಕುರಿತು ಮಾತನಾಡುವುದಿಲ್ಲ ಎಂದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇದನ್ನೂ ಓದಿ:ಮೌತ್ ಆರ್ಟ್ ಮೂಲಕ ಅರಳಿದ ಸಂವಿಧಾನ ಶಿಲ್ಪಿಯ ಚಿತ್ರ.. ಎಲ್ಲರ ಗಮನ ಸೆಳೆದ ಬೆಣ್ಣೆನಗರಿ ಕಲಾವಿದ
ಅಂಬೇಡ್ಕರ್ ರಚಿಸಿದ ಸಂವಿಧಾನದ ಕಾರಣದಿಂದಲೇ ಭಾರತದಲ್ಲಿ ಪ್ರಜಾಪ್ರಭುತ್ವ ಭದ್ರವಾಗಿದೆ. ದೇಶಾದ್ಯಂತ ಇಂದು ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದೆ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಇದೆ. ನಮ್ಮ ಅಕ್ಕಪಕ್ಕದ ರಾಷ್ಟ್ರಗಳಲ್ಲಿ ಪ್ರಜಾಪ್ರಭುತ್ವ ವಿಫಲಗೊಂಡಿದೆ. ಆದರೆ ಭಾರತದಲ್ಲಿ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ ಎಂದರು.
ಎಲ್ಲಾ ವರ್ಗದವರ ಹಿತ ಕಾಪಾಡಲು ಸಾಧ್ಯವಾಗಿದ್ದು ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಮಾತ್ರ. ಅಂಬೇಡ್ಕರ್ ಶೋಷಿತ ವರ್ಗದ ಪರ ಹೋರಾಟ ಮಾಡಿದ್ರು. ಸದಾ ಶೋಷಣೆಗೆ ಒಳಗಾಗಿದ್ದರೂ ಕೂಡ ಎಲ್ಲ ವರ್ಗದವರ ಹಿತ ಬಯಸಿದರು. ಅವರಿಗೆ ನುಡಿ ನಮನ ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದರು.