ಧಾರವಾಡ: ಬಿಜೆಪಿ ಯುವ ಮುಖಂಡ ಪ್ರವೀಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಪ್ರಮೋದ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. ಈ ರೀತಿಯ ಕ್ರೌರ್ಯ ಹದ್ದುಬಸ್ತಿನಲ್ಲಿಡುವ ಕಾರ್ಯವನ್ನು ಸರ್ಕಾರ ಕೂಡಲೇ ಮಾಡಬೇಕು. ಇಲ್ಲದೇ ಹೋದಲ್ಲಿ ಇನ್ನೂ ಸಾಕಷ್ಟು ಹಿಂದೂಗಳ ಬಲಿಯಾಗುತ್ತೆ ಅನಿಸುತ್ತಿದೆ. ಸರ್ಕಾರ ಈ ವಿಷಯದಲ್ಲಿ ವಿಫಲ ಆಗುತ್ತಿದೆ ಎಂದು ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಲೆ, ಹಲ್ಲೆ, ಗಲಾಟೆಯಾದಾಗ ಉಗ್ರವಾದ ಹೇಳಿಕೆಗಳು ವ್ಯಕ್ತವಾಗುತ್ತವೆ. ಆದರೆ ಮುಂದೆ ಏನು? ಇನ್ನುವರೆಗೆ ಯಾವುದೇ ರೀತಿಯ ಕಠಿಣ ಪ್ರಕ್ರಿಯೆ ನಡೆದಿಲ್ಲ. ಇದೇ ಕಾರಣಕ್ಕೆ ಪ್ರವೀಣ ಹತ್ಯೆ ಆಗಿದೆ. ಇದು ಸರ್ಕಾರದ ವೈಫಲ್ಯ ಎಂದು ಹರಿಹಾಯ್ದರು.
ಸರ್ಕಾರಕ್ಕೆ ಮೋದಿ ಮತ್ತು ಯೋಗಿ ಮಾದರಿಯ ಗಟ್ಸ್ ಇಲ್ಲ ಮುತಾಲಿಕ್ ಬಿಜೆಪಿಗೆ ಹಿಂದೂಗಳ ಸುರಕ್ಷತೆ ಬಗ್ಗೆ ಕಾಳಜಿಯಿದ್ದಲ್ಲಿ ಎಸ್‌ಡಿಪಿಐ, ಪಿಎಫ್ಐ ಬ್ಯಾನ್ ಮಾಡಬೇಕು. ಹತ್ಯೆ ಹಿಂದೆ ಕೇರಳದ ಮೂಲ ಅಂತಾ ಹೇಳುತ್ತಿದ್ದಾರೆ. ವಾರದ ಹಿಂದೆ ನಡೆದ ಹತ್ಯೆಗೆ ಸೇಡು ಅಂತಾನೂ ಹೇಳುತ್ತಿದ್ದಾರೆ. ನಾವು ತಿರುಗಿ ಬಿದ್ದರೆ ಕಷ್ಟ ಆಗುತ್ತೆ. ಆದ್ರೆ ಈ ರೀತಿ ಕೊಲೆಗೆ ಕೊಲೆ ಎಂಬ ಮಾನಸಿಕತೆ ಇರಬಾರದು ಎಂದರು.
ಸ್ವಯಂ ರಕ್ಷಣೆಗೆ ಹಿಂದೂ ಸಮಾಜ ಸಿದ್ಧವಾಗಬೇಕಿದೆ. ಇಲ್ಲದೇ ಹೋದಲ್ಲಿ ಸರ್ಕಾರ, ಬಿಜೆಪಿ, ಕಾನೂನು ಏನೂ ಮಾಡಲು ಆಗುವುದಿಲ್ಲ ಸರ್ಕಾರದ ಹದ್ದಿನ ಕಣ್ಣು ಎಲ್ಲಿದೆ? ಸರ್ಕಾರದ ಬಿಗಿಯಾದ ಕ್ರಮ ಇಲ್ಲದ್ದಕ್ಕೆ ಇದೆಲ್ಲ ಆಗುತ್ತಿದೆ. ಮೋದಿ ಮತ್ತು ಯೋಗಿ ಮಾದರಿಯಲ್ಲಿ ಗಟ್ಸ್ ಇಲ್ಲ. ಆ ಧೈರ್ಯ, ಮಾನಸಿಕತೆ ಇವರಿಗೆ ಇಲ್ಲ, ಆ ನೈತಿಕತೆಯೂ ಇವರಿಗೆ ಇಲ್ಲ ಎಲ್ಲೋ ಒಂದು ಕಡೆ ಆತಂಕ, ಭಯ ಇದೆ. ಮುಸ್ಲಿಂ ವೋಟ್‌ಗಾಗಿ ಸ್ವಲ್ಪ ಆಸೆಪಡುತ್ತಾ ಇದ್ದಾರೆ ಎಂದು ಹೇಳಿದರು.
ದಕ್ಷಿಣ ಕನ್ನಡ, ಶಿವಮೊಗ್ಗ ಬಿಜೆಪಿಯ ಭದ್ರ ಕೋಟೆ ಅಲ್ಲಿಗೇ ಬಂದು ಹೊಡಿತಾ ಇದಾರೆ. ಹಾಗಾದರೆ ಭದ್ರ ಕೋಟೆ ಛಿದ್ರವಾಗುತ್ತಿದೆಯಲ್ಲ, ಹಿಂದೂಗಳ ಕೊಲೆಮಾಡಿದರೂ ಏನೂ ಮಾಡಲು ಆಗೋದಿಲ್ಲ ಎಂಬ ಸಂದೇಶ ಕೊಡುತ್ತಿದ್ದಾರೆ. ಎಸ್‌ಡಿಪಿಐ, ಪಿಎಫ್ಐ ಬ್ಯಾನ್ ಮಾಡಬೇಕು, ಇಲ್ಲವೇ ಸಿಎಂ ರಾಜೀನಾಮೆ ಕೊಡಬೇಕು. ಇನ್ನೂ ಅದೆಷ್ಟು ಬಲಿ ಕೊಡಬೇಕು ಅಂದುಕೊಂಡಿದ್ದೀರಿ? ಇದಕ್ಕೆ ಬಿಜೆಪಿಯೇ ಕಾರಣ. ಬ್ಯಾನ್ ಮಾಡದೇ ಇದ್ದುದದಕ್ಕೆ ಈ ಕೊಲೆ ಅಗಿದೆ ಎಂದರು.
ಇದನ್ನೂ ಓದಿ :Praveen Nettaru murder: ಸಿಎಂ ಬೊಮ್ಮಾಯಿಗೆ ತನಿಖೆ ಮಾಹಿತಿ ನೀಡಿದ ಡಿಜಿಪಿ ಸೂದ್