ಹುಬ್ಬಳ್ಳಿ: ಸಮಪರ್ಕ ಕುಡಿಯುವ ನೀರು ಪೂರೈಕೆ ಮಾಡದೇ ಇರುವ ಕಾರಣ ಪಿಡಿಒ ಅಮಾನತಿಗೆ ಆಗ್ರಹಿಸಿ ಕುಂದಗೋಳ ತಹಶೀಲ್ದಾರ್ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ ಘಟನೆ ನಡೆಯಿತು.
ಅಸಮಪರ್ಕ ನೀರು ಪೂರೈಕೆ ಆರೋಪ: ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು - undefined
ನಾಲ್ಕೈದು ತಿಂಗಳಿಂದ ಶಿರೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಸಂಬಂಧಪಟ್ಟ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಅಧಿಕಾರಿಗಳು ಬೇಜಾವಾಬ್ದಾರಿಯನ್ನು ತೋರುತ್ತಿದ್ದಾರೆ ಎಂದು ಶಿರೂರು ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು.

ಶಿರೂರು ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ
ಶಿರೂರು ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ
ಕುಂದಗೋಳ ತಾಲೂಕಿನ ಶಿರೂರು ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು. ನಾಲ್ಕೈದು ತಿಂಗಳಿಂದ ಶಿರೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಸಂಬಂಧಪಟ್ಟ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಅಧಿಕಾರಿಗಳು ಬೇಜಾವಾಬ್ದಾರಿಯನ್ನು ತೋರುತ್ತಿದ್ದಾರೆ. ಹೀಗಾಗಿ ಶಿರೂರ ಗ್ರಾಮ ಪಂಚಾಯಿತಿ ಪಿಡಿಒ, ಇಒ ಅಮಾನತು ಮಾಡುವಂತೆ ಕುಂದಗೋಳ ತಹಶೀಲ್ದಾರರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.