ಹುಬ್ಬಳ್ಳಿ:ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಬಂಧಿಸಿ ಕ್ರಮ ಜರುಗಿಸುವಂತೆ ಒತ್ತಾಯಿಸಿ ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿ ಎದುರು ಸಂವಿಧಾನ ಸುರಕ್ಷಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅನುರಾಗ್ ಸಿಂಗ್ ಠಾಕೂರ್ ಕ್ಷಮೆಗೆ ಒತ್ತಾಯಿಸಿ ಪ್ರತಿಭಟನೆ.. - Protest by Constitutional Security Committee activists
ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ 'ಗದ್ದಾರೋಂಕೋ ಗೋಲಿ ಮಾರೋ ಸಾಲೋಂಕೋ' ಎಂಬ ಅಸಂವಿಧಾನಿಕ ಶಬ್ಧ ಬಳಸಿದ್ದಾರೆ. ಸಚಿವ ಠಾಕೂರ್ ದೇಶದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದ ದಿನದಿಂದ ಹಿಡಿದು ಈವರೆಗೂ ಬೃಹತ್ ಪ್ರಮಾಣದಲ್ಲಿ ವಿವಿಧ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ. ಆದರೆ, ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ 'ಗದ್ದಾರೋಂಕೋ ಗೋಲಿ ಮಾರೋ ಸಾಲೋಂಕೋ' ಎಂಬ ಅಸಂವಿಧಾನಿಕ ಶಬ್ಧ ಬಳಸಿದ್ದಾರೆ. ಸಚಿವ ಠಾಕೂರ್ ದೇಶದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಈ ದಿಸೆಯಲ್ಲಿ ದೇಶದ ಯುವಕರಿಗೆ ಪ್ರಚೋದನೆ ಹೇಳಿಕೆಗಳನ್ನು ನೀಡಿ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಕೂಡಲೇ ಸಚಿವ ಅನುರಾಗಸಿಂಗ್ ಠಾಕೂರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅಷ್ಟೇ ಅಲ್ಲ, ಸಚಿವ ಠಾಕೂರ್ ದೇಶದ ಪ್ರಜೆಗಳಲ್ಲಿ ಕ್ಷಮೆಯಾಚನೆ ಮಾಡಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.