ಹುಬ್ಬಳ್ಳಿ: ಆನ್ಲೈನ್ ತರಗತಿ ಹಾಗೂ ಆನ್ಲೈನ್ ಪರೀಕ್ಷೆ ವಿರೋಧಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಆನ್ಲೈನ್ ಶಿಕ್ಷಣ ವ್ಯವಸ್ಥೆ ವಿರೋಧಿಸಿ ಪ್ರತಿಭಟನೆ
ಆನ್ಲೈನ್ ಶಿಕ್ಷಣ ವ್ಯವಸ್ಥೆ ವಿರೋಧಿಸಿ ಮತ್ತು ಪದವಿ ಇಂಜಿನಿಯರಿಂಗ್, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆಯೇ ಮುಂದಿನ ವರ್ಷಕ್ಕೆ ಉತ್ತೀರ್ಣ ಮಾಡಬೇಕು ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಒತ್ತಾಯಿಸಿದರು.
ಪ್ರತಿಭಟನೆ
ಪದವಿ ಇಂಜಿನಿಯರಿಂಗ್, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆಯೇ ಮುಂದಿನ ವರ್ಷಕ್ಕೆ ತೇರ್ಗಡೆ ಮಾಡುವಂತೆ ಆಗ್ರಹಿಸಿದರು. ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ವಿದ್ಯಾರ್ಥಿಗಳ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.