ಕರ್ನಾಟಕ

karnataka

ETV Bharat / city

ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ - ಸಂಸದ ತೇಜಸ್ವಿ ಸೂರ್ಯ ಹೇಳಿಕೆ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿರೋಧಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

protest against Tejaswi surya
protest against Tejaswi surya

By

Published : Dec 27, 2019, 7:57 AM IST

ಹುಬ್ಬಳ್ಳಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿರೋಧಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರತಿಭಟನೆ

ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯದ ಅಸಂಘಟಿತ ಕಾರ್ಮಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿರುವ ಪ್ರತಿಭಟನಾಕಾರರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಸದರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಶ್ರಮ ಜೀವಿಗಳು, ಪೌರಕಾರ್ಮಿಕರು, ಸ್ಲಂ ನಿವಾಸಿಗಳು ಅಸಂಘಟಿತ ವಲಯದ ಕಾರ್ಮಿಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಸಂಸದ ತೇಜಸ್ವಿ ಸೂರ್ಯ ಬಹಿರಂಗವಾಗಿ ಕ್ಷಮೆ ಕೇಳಬೇಕು, ಇಲ್ಲವಾದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ABOUT THE AUTHOR

...view details