ಹುಬ್ಬಳ್ಳಿ:ಕರ್ನಾಟಕ ವಕೀಲರ ಸಂರಕ್ಷಣಾ ಕಾಯ್ದೆ-2019ನ್ನು ಜಾರಿಗೆ ತರಬೇಕು ಒತ್ತಾಯಿಸಿ ಹುಬ್ಬಳ್ಳಿ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಧರಣಿ ಸತ್ಯಾಗ್ರಹ ನಡೆಯಿತು.
ಕರ್ನಾಟಕ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ವಕೀಲರಿಂದ ಧರಣಿ ಸತ್ಯಾಗ್ರಹ - ಕೋರ್ಟ್ ಸಂಕೀರ್ಣ ಆವರಣದಲ್ಲಿ ಪ್ರತಿಭಟನೆ
ವಕೀಲರಿಗೆ ಸಂರಕ್ಷಣೆ ಇಲ್ಲದಂತಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಕರ್ನಾಟಕ ವಕೀಲರ ಸಂರಕ್ಷಣಾ ಕಾಯ್ದೆ-2019ನ್ನು ಜಾರಿಗೆ ಮಾಡಬೇಕು ಎಂದು ಆಗ್ರಹಿಸಿದ ವಕೀಲರು ಧರಣಿ ಸತ್ಯಾಗ್ರಹ ನಡೆಸಿದರು.
protest by advocates
ನಗರದ ಕೋರ್ಟ್ ಸಂಕೀರ್ಣ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು, ಇತ್ತೀಚಿನ ದಿನಗಳಲ್ಲಿ ವಕೀಲರು ಮೇಲೆ ನಿರಂತರವಾಗಿ ಹಲ್ಲೆಯಾಗುತ್ತಿದ್ದು ವಕೀಲರಿಗೆ ಸಂರಕ್ಷಣೆ ಇಲ್ಲದಂತಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಕರ್ನಾಟಕ ವಕೀಲರ ಸಂರಕ್ಷಣಾ ಕಾಯ್ದೆ-2019ನ್ನು ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿದರು.
ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಹೋದಲ್ಲಿ ನಿರಂತರವಾಗಿ ಧರಣಿ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ವಕೀಲ ಸಂಘದ ಸದಸ್ಯರು ಭಾಗಿಯಾಗಿದ್ದರು.