ಧಾರವಾಡ: ಅಧಿಕಾರಿಗಳು ತಮಗೆ ಬೇಕಾದಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಧಾರವಾಡ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ನೇತೃತ್ವದಲ್ಲಿ ಜಿಪಂ ಆವರಣದಲ್ಲಿ ಧರಣಿ ನಡೆಸಲಾಯಿತು.
ಧಾರವಾಡ: ಜಿಪಂ ಅಧಿಕಾರಿಗಳ ವರ್ತನೆಗೆ ಬೇಸತ್ತು ಜಿಪಂ ಅಧ್ಯಕ್ಷರಿಂದಲೇ ಧರಣಿ - Protest by Dharwad District Panchayat President
ಜಿಪಂ ಅಧಿಕಾರಿಗಳ ವರ್ತನೆಯಿಂದಾಗಿ ಸರಿಯಾಗಿ ಕೆಲಸ ಮಾಡಲು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
![ಧಾರವಾಡ: ಜಿಪಂ ಅಧಿಕಾರಿಗಳ ವರ್ತನೆಗೆ ಬೇಸತ್ತು ಜಿಪಂ ಅಧ್ಯಕ್ಷರಿಂದಲೇ ಧರಣಿ Protest by Dharwad zilla Panchayat President](https://etvbharatimages.akamaized.net/etvbharat/prod-images/768-512-5404296-thumbnail-3x2-protest.jpg)
ಜಿಪಂ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ
ಜಿಪಂ ವಿಜಯಲಕ್ಷ್ಮೀ ಪಾಟೀಲ್ ಹಾಗೂ ಉಪಾಧ್ಯಕ್ಷ ಶಿವಾನಂದ ಕರಿಗಾರ ಸೇರಿದಂತೆ ಸದಸ್ಯರು ಧರಣಿ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅತಿವೃಷ್ಟಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಜಿಪಂ ಸದಸ್ಯರ ಗಮನಕ್ಕೆ ತರುತ್ತಿಲ್ಲ. ಅವರಿಗೆ ಬೇಕಾದಂತೆ ವರ್ತನೆ ಮಾಡುತ್ತಿದ್ದಾರೆ ಎಂದು ದೂರಿದರು.
ಜಿಪಂ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ
ಜಿಲ್ಲಾ ಪಂಚಾಯತಿ ಅಧಿಕಾರಿಗಳು ತಮ್ಮಗೆ ಬೇಕಾದ ಏಜೆನ್ಸಿಗಳಿಗೆ ಅಗ್ರಿಮೆಂಟ್ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿದರು. ನೆರೆ ಸಂತ್ರಸ್ತರಿಗೆ ಇನ್ನೂ ಸರಿಯಾಗಿ ಪರಿಹಾರ ವಿತರಣೆಯೇ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
TAGGED:
ಜಿಲ್ಲಾ ಪಂಚಾಯಿತಿ ಅಧಿಕಾರಿಗಳು