ಹುಬ್ಬಳ್ಳಿ: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳಟ್ಟಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಮಾಹಿತಿ ಕೇಳಿದ ಹಿನ್ನೆಲೆಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ವತಿಯಿಂದ ಹುಬ್ಬಳ್ಳಿಯ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ: ಮಾಹಿತಿ ಕೇಳಿದ ದಲಿತ ಯುವಕನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ - attack on a man
ಗ್ರಾಮ ಪಂಚಾಯತಿಯಲ್ಲಿ ಮಾಹಿತಿ ಕೇಳಿದ ಹಿನ್ನೆಲೆಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
protest
ಮಾಹಿತಿ ಕೇಳುವುದು ಎಲ್ಲರ ಹಕ್ಕಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ರೀತಿಯಲ್ಲಿ ಮಾಹಿತಿ ಕೇಳಿದರೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಮಾಜದಲ್ಲಿ ಬಹುತೇಕ ಕಡೆಗಳಲ್ಲಿ ಇಂದಿಗೂ ಕೂಡ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಕೂಡಲೇ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಅಧಿಕಾರಿಗಳು ಹಲ್ಲೆ ನಡೆಸಿದವ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದ ಆಗ್ರಹಿಸಿದರು.
Last Updated : Sep 3, 2020, 3:57 PM IST