ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ ಪ್ರತಿಭಟನಾಕಾರರ ಬಂಧನ - ಹುಬ್ಬಳ್ಳಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಸುದ್ದಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಐಪಿಸಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ನಡುವೆಯೂ ಪ್ರತಿಭನೆ ನಡೆಯುತ್ತಿದ್ದು, ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಗಳು ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ನಿಷೇಧಾಜ್ಞೆ ಉಲ್ಲಂಘಿಸಿದ ಪ್ರತಿಭಟನಾಕಾರರ ಬಂಧ
ನಗರದ ಅಂಬೇಡ್ಕರ್ ವೃತ್ತದಲ್ಲಿ ನಿಷೇಧಾಜ್ಞೆ ಜಾರಿಯ ನಡುವೆಯೂ ಕಾಂಗ್ರೆಸ್, ಸಿಪಿಐ, ಸಿಪಿಎಂ, ದಲಿತ ಪರ ಸಂಘಟನೆ ಸೇರಿದಂತೆ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು, ಈ ವೇಳೆ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು 20 ಕ್ಕೂ ಹೆಚ್ಚು ಪ್ರತಿಭಟನಾನಿರತರನ್ನು ಬಂಧಿಸಿದರು.
ಪ್ರತಿಭಟನೆಯಲ್ಲಿ ಬಾಬಾಜಾನ್ ಮುಧೋಳ, ರಾಜಶೇಖರ ಮೆಣಸಿನಕಾಯಿ, ಅನ್ವರ ಮುಧೋಳ, ಸಿದ್ದು ತೇಜಿ, ವಿಜಯ ಗುಂಟ್ರಾಳ, ಬಸೀರ ಅಹ್ಮದ ಮುಧೋಳ, ಮಹೇಶ ಪತ್ತಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.