ಹಾವೇರಿ/ಹುಬ್ಬಳ್ಳಿ/ಚಿಕ್ಕೋಡಿ:ವೀಕೆಂಡ್ ಕರ್ಫ್ಯೂಗೆ ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ನಗರದ ಜನ ಪ್ರಮುಖ ಸ್ಥಳ ಮತ್ತು ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ.
ಹೋಟೆಲ್, ಮೆಡಿಕಲ್ ಶಾಪ್, ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಬಸ್ ನಿಲ್ದಾಣ ಸೇರಿದಂತೆ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಿದ್ದು, ಆಯಕಟ್ಟಿನ ಜಾಗಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಚಿಕ್ಕೋಡಿಯಲ್ಲಿ ಹೆಸರಿಗಷ್ಟೇ ವೀಕೆಂಡ್ ಕರ್ಫ್ಯೂ:
ರಾಜ್ಯಾದ್ಯಂತ ಕೊರೊನಾ, ಒಮಿಕ್ರಾನ್ ಸೋಂಕು ತಡೆಗೆ ರಾಜ್ಯ ಸರ್ಕಾರ ಹೇರಿರುವ ವೀಕೆಂಡ್ ಕರ್ಫ್ಯೂಗೆ ಚಿಕ್ಕೋಡಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಜನಸಂಚಾರ ಪ್ರಾರಂಭವಾಗುತ್ತಿದ್ದು, ಅಂಗಡಿ ಮುಂಗಟ್ಟುಗಳು ಮಾತ್ರ ಬಂದ್ ಆಗಿವೆ.
ಚಿಕ್ಕೋಡಿ ಪಟ್ಟಣದಲ್ಲಿ ಬೈಕ್, ಸವಾರರು, ವಾಹನ ಸವಾರರು ಎಂದಿನಂತೆ ಓಡಾಟ ನಡಸುತ್ತಿದ್ದಾರೆ. ಇತ್ತ ವೀಕೆಂಡ್ ಕರ್ಫ್ಯೂ ಜಾರಿಗೆ ಬಂದೋಬಸ್ತ್ ಮಾಡಿಕೊಳ್ಳಬೇಕಿದ್ದ ಪೊಲೀಸರು ಮಾತ್ರ ಎಲ್ಲಿಯೂ ಬ್ಯಾರಿಕೇಡ್ ಗಳನ್ನು ಹಾಕದೇ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರುವಲ್ಲಿ ವಿಫಲವಾಗಿದ್ದಾರೆ ಎನ್ನಲಾಗ್ತಿದೆ.
ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಇದ್ದರೂ ಚಿಕ್ಕೋಡಿಯಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿಲ್ಲ. ಪಟ್ಟಣದಲ್ಲಿ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಬೇಕಿದ್ದ ಪೊಲೀಸರು ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ವೀಕೆಂಡ್ ಕರ್ಫ್ಯೂ ಹೆಸರಿಗಷ್ಟೇ ಸೀಮಿತವಾಗಿದೆ.