ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಸೌಂದರ್ಯಕ್ಕೆ ಧಕ್ಕೆಯನ್ನುಂಟು ಮಾಡುವ ಅನಧಿಕೃತ ನಾಮಫಲಕಗಳು ಹಾಗೂ ಫುಟ್ಪಾತ್ ಅತಿಕ್ರಮಣ ಮಾಡಿದ್ದ ಅಂಗಡಿಗಳನ್ನು ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ನೇತೃತ್ವದಲ್ಲಿ ತೆರವು ಮಾಡಲಾಯಿತು.
ಮಹಾನಗರ ಪಾಲಿಕೆಯಿಂದ ಅತಿಕ್ರಮಣ ಫುಟ್ಪಾತ್ ತೆರವು
ಹುಬ್ಬಳ್ಳಿಯ ಕೊಪ್ಪಿಕರ ರಸ್ತೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಫುಟ್ಪಾತ್ ಅತಿಕ್ರಮಣ ಮಾಡಿದ್ದ ಅಂಗಡಿಗಳು ಹಾಗೂ ಅನಧಿಕೃತ ನಾಮಫಲಕಗಳಿಂದ ಸಾರ್ವಜನಿಕರಿಗೆ ಹಾಗೂ ಅವಳಿನಗರದ ಸೌಂದರ್ಯಕ್ಕೆ ಧಕ್ಕೆಯುಂಟಾದ ಬೆನ್ನಲ್ಲೇ ತೆರವು ಕಾರ್ಯಾಚರಣೆ ನಡೆಸಲಾಯಿತು.
Breaking News

ಈ ಹಿಂದೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ದಾಜೀಬಾನ ಪೇಟೆ, ದುರ್ಗದ ಬೈಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಿದ ಮಹಾನಗರ ಪಾಲಿಕೆ ಅಧಿಕಾರಿಗಳು ಅತಿಕ್ರಮಣ ಮಾಡಿದವರಿಗೆ ಬಿಸಿ ಮುಟ್ಟಿಸಿದ್ದಾರೆ.