ಹುಬ್ಬಳ್ಳಿ: ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಇಲ್ಲದೇ ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಆಗಮಿಸಿದ್ದ 8 ಪ್ರಯಾಣಿಕರ ಸ್ವ್ಯಾಬ್ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ ನಾಲ್ವರನ್ನು ಹುಬ್ಬಳ್ಳಿಯ ಅಂಜುಮನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ರಾಜ್ಯ ಸರ್ಕಾರ ಕೇರಳ ಹಾಗೂ ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ಆದೇಶಿಸಿದೆ. ಹೀಗಾಗಿ, ಹು-ಧಾ ಮಹಾನಗರ ಪಾಲಿಕೆ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ ನೇತೃತ್ವದಲ್ಲಿ ಮಹಾರಾಷ್ಟ್ರದಿಂದ ರಾಜ್ಯ ಸಾರಿಗೆ ಹಾಗೂ ಖಾಸಗಿ ಬಸ್‌ಗಳ ಮೂಲಕ ಆಗಮಿಸಿದ ಪ್ರಯಾಣಿಕರ ವಿವರ ಪರಿಶೀಲಿಸಲಾಯಿತು.