ಕರ್ನಾಟಕ

karnataka

ETV Bharat / city

ಧಾರವಾಡ: ಧರಣಿ ಸತ್ಯಾಗ್ರಹ ಸ್ಥಳಕ್ಕೆ ರಾಕೇಶ್ ಟಿಕಾಯತ್ ಭೇಟಿ - Rakesh Tikayat

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಹೆಚ್​. ನೀರಲಕೇರಿ ಅವರ ನೇತೃತ್ವದಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ರೈತ ಹೋರಾಟಗಾರ ರಾಕೇಶ್ ಟಿಕಾಯತ್ ಭೇಟಿ ನೀಡಿದರು.

ಧರಣಿ ಸತ್ಯಾಗ್ರಹ ಸ್ಥಳಕ್ಕೆ ರೈತ ಹೋರಾಟಗಾರ ರಾಕೇಶ್ ಟಿಕಾಯತ್ ಭೇಟಿ
ಧರಣಿ ಸತ್ಯಾಗ್ರಹ ಸ್ಥಳಕ್ಕೆ ರೈತ ಹೋರಾಟಗಾರ ರಾಕೇಶ್ ಟಿಕಾಯತ್ ಭೇಟಿ

By

Published : Mar 31, 2021, 11:25 AM IST

ಧಾರವಾಡ: ದೆಹಲಿಯ ಅಖಿಲ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟ ಬೆಂಬಲಿಸಿ ರೈತ ಹಿತರಕ್ಷಣಾ ಪರಿವಾರದ ವತಿಯಿಂದ 60 ದಿನಗಳಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ರೈತ ಹೋರಾಟಗಾರ ರಾಕೇಶ್ ಟಿಕಾಯತ್ ಭೇಟಿ ನೀಡಿದರು.

ಧರಣಿ ಸತ್ಯಾಗ್ರಹ ಸ್ಥಳಕ್ಕೆ ರೈತ ಹೋರಾಟಗಾರ ರಾಕೇಶ್ ಟಿಕಾಯತ್ ಭೇಟಿ

ನಗರದ ಸರ್ಕಿಟ್ ಹೌಸ್ ನಿಂದ ಪಾದಯಾತ್ರೆ ಮೂಲಕ ಧರಣಿ ಸ್ಥಳಕ್ಕೆ ಆಗಮಿಸಿದ ರಾಕೇಶ್​ ಟಿಕಾಯತ್​ ಸತ್ಯಾಗ್ರಹ ಸ್ಥಳದಲ್ಲಿ ಉಪಹಾರ ಸೇವಿಸಿದರು. ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಹೆಚ್​. ನೀರಲಕೇರಿ ಅವರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಸತ್ಯಾಗ್ರಹದಲ್ಲಿ ಕೃಷಿ ಕಾನೂನುಗಳನ್ನು ವಿರೋಧಿಸಿ ನಿತ್ಯ ಎರಡು ಗ್ರಾಮಗಳ ಜನರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದರು. ಇಂದು ರಾಕೇಶ ಟಿಕಾಯತ್ ಅವರ ಸಮ್ಮುಖದಲ್ಲಿ ಧರಣಿ ಸತ್ಯಾಗ್ರಹ ಮುಕ್ತಾಯಗೊಳ್ಳಲಿದೆ.

ABOUT THE AUTHOR

...view details