ಕರ್ನಾಟಕ

karnataka

ETV Bharat / city

ರೋಗನಿರೋಧಕ ಶಕ್ತಿ ವೃದ್ಧಿಸುವ ಮಾಂಸ ಮಾರಾಟಕ್ಕೆ ಅವಕಾಶ ನೀಡಿ: ವ್ಯಾಪಾರಸ್ಥರ ಮನವಿ - ಮಾಂಸ ಮಾರಾಟಕ್ಕೆ ಅವಕಾಶ ನೀಡಲು ಮನವಿ

ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಂತ ಹಂತವಾಗಿ ಕಡಿಮೆಯಾಗುತ್ತಿದ್ದು, ಜಿಲ್ಲಾಡಳಿತ ಬಾರ್ ಹಾಗೂ ಹೋಟೆಲ್​ಗಳಲ್ಲಿ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆಯವರೆಗೆ ಪಾರ್ಸೆಲ್​ಗೆ ಅವಕಾಶ ಕಲ್ಪಿಸಿದೆ. ಮಾಂಸ ಮತ್ತು ಮೊಟ್ಟೆಯಲ್ಲಿ ವಿಟಮಿನ್ ಜಾಸ್ತಿ ಇರುವುದರಿಂದ ಮುಂಜಾನೆ 6ರಿಂದ 10 ಗಂಟೆಯವರೆಗೆ ಮಾಂಸ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ವ್ಯಾಪಾರಿಗಳು ಆಗ್ರಹಿಸಿದ್ದಾರೆ.

Hubli
ರೋಗನಿರೋಧಕ ಶಕ್ತಿ ವೃದ್ಧಿಸುವ ಮಾಂಸ ಮಾರಾಟಕ್ಕೆ ಅವಕಾಶ ನೀಡಿ

By

Published : Jun 2, 2021, 7:35 AM IST

ಹುಬ್ಬಳ್ಳಿ: ಲಾಕ್​ಡೌನ್​ ಹಿನ್ನೆಲೆಯಲ್ಲಿ ಅಂಗಡಿ ಮುಗ್ಗಟ್ಟು ಸೇರಿದಂತೆ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಸದ್ಯ ಜಿಲ್ಲಾಡಳಿತ ಹೋಟೆಲ್ ಹಾಗೂ ಬಾರ್​ಗಳಲ್ಲಿ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆಯವರೆಗೆ ಪಾರ್ಸೆಲ್​ಗೆ ಅವಕಾಶ ನೀಡಿದೆ. ಅದರಂತೆ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಮಾಂಸ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಧಾರವಾಡ ಚಿಕನ್ ವ್ಯಾಪಾರ ಸಂಘದ ಕಾರ್ಯದರ್ಶಿ ರವಿ ಪಟ್ಟಣ್ ಒತ್ತಾಯಿಸಿದ್ದಾರೆ.

ರೋಗನಿರೋಧಕ ಶಕ್ತಿ ವೃದ್ಧಿಸುವ ಮಾಂಸ ಮಾರಾಟಕ್ಕೆ ಅವಕಾಶ ನೀಡಲು ಆಗ್ರಹ

ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಂತ ಹಂತವಾಗಿ ಕಡಿಮೆಯಾಗುತ್ತಿದೆ. ಹೀಗಾಗಿ, ಜಿಲ್ಲಾಡಳಿತ ಬಾರ್ ಹಾಗೂ ಹೋಟೆಲ್​ಗಳಲ್ಲಿ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆಯವರೆಗೆ ಪಾರ್ಸೆಲ್​ಗೆ ಅವಕಾಶ ಕಲ್ಪಿಸಿದೆ. ಮಾಂಸ ಮತ್ತು ಮೊಟ್ಟೆಯಲ್ಲಿ ವಿಟಮಿನ್ ಜಾಸ್ತಿ ಇರುವುದರಿಂದ ಕೊರೊನಾ ರೋಗಿಗಳಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸಲು ಸಹಾಯ ಮಾಡುತ್ತದೆ.

ಆದ್ದರಿಂದ ಹಸಿ ಮಾಂಸ ಮತ್ತು ಮೊಟ್ಟೆ ಮಾರಾಟಕ್ಕೆ ಮುಂಜಾನೆ 6ರಿಂದ 10 ಗಂಟೆಯವರೆಗೆ ಅವಕಾಶ ನೀಡಬೇಕು. ಮಾಂಸ ಮಾರಾಟಕ್ಕೆ ಅವಕಾಶ ಕಲ್ಪಿಸಿದ್ರೆ ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಮಾಡಿದವರಿಗೆ ಬಹಳಷ್ಟು ಅನುಕೂಲವಾಗಲಿದೆ. ಕೊರೊನಾ ನಿಯಮಗಳನ್ನು ಪಾಲಿಸಿಕೊಂಡು ಮಾಂಸ ಮಾರಾಟ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಹಾಗೂ ಸಚಿವ ಜಗದೀಶ್ ಶೆಟ್ಟರ್​ಗೆ ಮನವಿ ಮಾಡಿದರು.

ಇದನ್ನೂ ಓದಿ:ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟ: 7 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

ABOUT THE AUTHOR

...view details